ಬೆಳ್ತಂಗಡಿ: ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ತಾಲೂಕಿನಲ್ಲಿ ಮನೆ ಮಾತಾಗಿರುವ ನಾವೂರು ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ ಮೇಲೆ ಅಕ್ಟೋಬರ್ 06 ರಂದು ದುಷ್ಕರ್ಮಿಗಳು ಡೀಸೆಲ್ ಸುಟ್ಟು ಬೆಂಕಿ ಹಚ್ಚಿರುವ ಹೇಯ ಕೃತ್ಯ ಅತ್ಯಂತ ಖಂಡನೀಯ ಹಾಗೂ ಆಘಾತಕಾರಿಯಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದ ತಪ್ಪಿತಸ್ಥರು ಯಾರೇ ಆಗಿರಲಿ, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಆದಷ್ಟು ಶೀಘ್ರವಾಗಿ ಬಂಧಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಅವರು ತಮ್ಮ ಮಾಧ್ಯಮ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಅಲ್ಲದೆ, ಡಾ. ಪ್ರದೀಪ್ ರವರೊಂದಿಗೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ತಂಡ ಸದಾ ಇರಲಿದೆ ಎಂದು ಅವರು ತಿಳಿಸಿದ್ದಾರೆ.














