ರಾಮಕುಂಜ : ಇಲ್ಲಿನ ಕೂಡು ರಸ್ತೆಯಲ್ಲಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಆಟೋದಲ್ಲಿ ಒಟ್ಟು 5 ಜನರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಒಬ್ಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಉಳಿದ 4 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳೆಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.












