ಮುಂಬಯಿ : ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದ ಕೆಲವೇ ದಿನಗಳ ಬಳಿಕ ಇದೀಗ ಬಾಲಿವುಡ್ನ ಮತ್ತೊಬ್ಬ ನಟನಿಗೆ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ನಟ ತುಷಾರ್ ಕಪೂರ್ ಬೆದರಿಕೆ ಕರೆ ಬಂದಿರುವ ಬಗ್ಗೆ ವರದಿಯಾಗಿದ್ದು, ಮುಂಬೈ ಕ್ರೈಮ್ ಬ್ರ್ಯಾಂಚ್ ತನಿಖೆ ಮುಂದುವರೆಸಿದೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಹೆಸರು ಹೇಳಿಕೊಂಡು ಕರೆ ಮಾಡಿದಾತ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಆದಾಗ್ಯೂ, ಮುಂಬೈ ಅಪರಾಧ ವಿಭಾಗ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಕರೆಯನ್ನು ಮಾಡಿದ ವ್ಯಕ್ತಿಯ ಗುರುತಿನ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು, ಈ ಬೆದರಿಕೆ ಕರೆ ಸಂಪೂರ್ಣವಾಗಿ ಹುಸಿ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಕರೆ ಮಾಡಿದ ವ್ಯಕ್ತಿಯು ತಾನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯ “ಹ್ಯಾರಿ ಬಾಕ್ಸರ್” ಎಂದು ಪರಿಚಯಿಸಿಕೊಂಡು ನಟನಿಂದ ದೊಡ್ಡ ಮೊತ್ತದ ಹಣವನ್ನು ಬೇಡಿಕೆ ಇಟ್ಟಿದ್ದನು. ಘಟನೆ ಬೆನ್ನಲ್ಲೇ ತುಷಾರ್ ಕಪೂರ್ ತಕ್ಷಣವೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದರು.















