ಪುತ್ತೂರು ಶಾಸಕರಿಗೆ ಟಿಕೆಟ್‌ ಸಿಕ್ಕಿದ್ದು ಸ್ಟಿಂಗ್‌ ಆಪರೇಷನ್‌ನಿಂದ ಎಂಬ ಅನುಮಾನ ಬಲವಾಗಿದೆ! ಪ್ರಾಮಾಣಿಕ ಕಾರ್ಯಕರ್ತರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಇಲ್ಲ!! ನ್ಯಾಯಯುತ ತನಿಖೆಗೆ ಆಗ್ರಹಿಸಿದ ದಯಾನಂದ ಶೆಟ್ಟಿ ಉಜಿರೆಮಾರು!

ಪುತ್ತೂರು : ಹಿಂದಿನ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎಂಟು ಪ್ರಮುಖರು ಕೆಪಿಸಿಸಿಗೆ ಟೆಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರೂ, ಅವರಿಗೆ ಅವಕಾಶ ನೀಡದೆ ಒಂಬತ್ತನೇ ವ್ಯಕ್ತಿಗೆ ಟಿಕೆಟ್‌ ನೀಡಲಾಗಿತ್ತು. ಹಾಗಾದರೆ ಆ ಒಂಬತ್ತನೇ ವ್ಯಕ್ತಿ ಎಲ್ಲಿಂದ ಬಂದರು ಎಂಬ ಪ್ರಶ್ನೆ ಮೂಡುತ್ತದೆ. ಪುತ್ತೂರಿನಲ್ಲಿ ನಡೆದಿರುವುದಾಗಿ ಹೇಳಲಾಗುತ್ತಿರುವ ಸ್ಟಿಂಗ್‌ ಆಪರೇಷನ್‌ಗೂ ಟಿಕೆಟ್‌ ಹಂಚಿಕೆಗೂ ಸಂಬಂಧವಿದೆಯೇ ಎಂಬ ಸಂಶಯವಿದ್ದು, ಈ ಬಗ್ಗೆ ನ್ಯಾಯಯುತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಜನರ ಮುಂದೆ ಬಹಿರಂಗಪಡಿಸಬೇಕು. ನಮಗೆ ಕಾಂಗ್ರೆಸ್‌ ರೀತಿ ಭ್ರಷ್ಟಾಚಾರ ಮಾಡಲು ಬರುವುದಿಲ್ಲ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆಗ್ರಹಿಸಿದರು.

Advertisement

ಅವರು ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

Advertisement
Advertisement

ಪುತ್ತೂರು ಶಾಸಕರು ಬಿಜೆಪಿ ಜಿಲ್ಲಾಧ್ಯಕ್ಷರು ಕೇಳಿದ ಪ್ರಶ್ನೆಗೆ ಉತ್ತರಿಸದೆ ಇನ್ನೇನೋ ಹೇಳುವುದು ಮತ್ತು ಅಧ್ಯಕ್ಷರನ್ನು ಏಕವಚನದಲ್ಲಿ ಉಲ್ಲೇಖಿಸಿ ಮಾತನಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸ್ಟಿಂಗ್‌ ಆಪರೇಷನ್‌ ಕುರಿತು ನೀಡಿರುವ ಹೇಳಿಕೆಗಳು ಹಲವು ಅನುಮಾನಗಳಿಗೆ ಕಾರಣವಾಗಿವೆ. ಈ ಕುರಿತು ಸರಿಯಾದ ತನಿಖೆ ನಡೆಯಬೇಕೆಂದು ಆಗ್ರಹಿಸಿದರು ಎಂದು ತಿಳಿದು ಬಂದಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page