ಮೂಡುಬಿದಿರೆ: ಬಿಜೆಪಿಯ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ತೊಡಗಿಸಿಕೊಂಡಿದ್ದ ಯುವ ಮುಖಂಡ, ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ (39) ಸೆ.22ರಂದು ಇಹಲೋಕ ತ್ಯಜಿಸಿದ್ದಾರೆ.
ಉದ್ಯಮಿಯಾಗಿ ಹೆಸರು ಗಳಿಸಿದ್ದ ಅವರು ಹಲವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿದ್ದರು. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಜಿಲ್ಲಾ ಬಿಜೆಪಿ ಯುವ ಮೋರ್ಚಾದಲ್ಲಿ ಈ ಹಿಂದೆ ಮಂಡಲ ಯುವಮೋರ್ಚಾದ ಕಾರ್ಯದರ್ಶಿಯಾಗಿದ್ದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.













