ದೇಶಾದ್ಯಂತ ಬ್ಲ್ಯಾಕ್ ಡೇ ಆಚರಿಸಲು ಕಾಂಗ್ರೆಸ್‌ ಕರೆ! ರಾಜ್ಯ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆಗೆ ಸೂಚನೆ!!

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ನಾಯಕರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿರುವ ಕಾಂಗ್ರೆಸ್, ಅಕ್ಟೋಬರ್ 8ರಂದು ದೇಶಾದ್ಯಂತ ‘ಬ್ಲ್ಯಾಕ್ ಡೇ’ ಆಚರಿಸಲು ಕರೆ ನೀಡಿದೆ. ರಾಜ್ಯ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ವ್ಯಾಪಕ ಪ್ರತಿಭಟನೆಗಳನ್ನು ನಡೆಸುವಂತೆ ಪಕ್ಷದ ಘಟಕಗಳಿಗೆ ಸೂಚನೆ ನೀಡಲಾಗಿದೆ.

Advertisement

ಚುನಾವಣಾ ಆಯೋಗದ ವಿರುದ್ಧದ ಹೋರಾಟವನ್ನು ಜ್ಞಾನೇಶ್ ಕುಮಾರ್ ಹುದ್ದೆಯಿಂದ ಕೆಳಗಿಳಿಯುವವರೆಗೆ ಮುಂದುವರಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಹಲವು ಪ್ರಶ್ನೆಗಳನ್ನು ಎತ್ತುತ್ತಿದ್ದು, ಇದೇ ವಿಚಾರ ಪ್ರತಿಭಟನೆಗೆ ಪ್ರಮುಖ ಕಾರಣವಾಗಿದೆ. ಬುಧವಾರ ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂತರ್ ಮಂತರ್‌ ಕಡೆಗೆ ತೆರಳುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆದಿದ್ದರು. ಬಳಿಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆಯಲಾಯಿತು. ಕಾಂಗ್ರೆಸ್ ಪ್ರಕಾರ, ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲಪ್ರಯೋಗ ನಡೆದಿದ್ದು, ಕೆಲವರಿಗೆ ಗಾಯಗಳಾಗಿವೆ. ಈ ಕ್ರಮವನ್ನು ಪಕ್ಷವು ಸಂವಿಧಾನದ ಮೇಲಿನ ದಾಳಿ ಎಂದು ಆರೋಪಿಸಿದೆ.

Advertisement
Advertisement

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಪಕ್ಷ ತಿಳಿಸಿದೆ. ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂಬುದು ಕಾಂಗ್ರೆಸ್‌ನ ಪ್ರಮುಖ ಬೇಡಿಕೆಯಾಗಿದೆ ಎಂದು ಜಾತಾಣ ಮೂಲಗಳು ವರದಿ ಮಾಡಿವೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page