ಸೇವಾ ಸಂಕಲ್ಪದೊಂದಿಗೆ ರಕ್ತದಾನ!! ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ!

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಪುತ್ತೂರು ಬಿಜೆಪಿ ಯುವಮೋರ್ಚಾದ ಗ್ರಾಮಾಂತರ ಹಾಗೂ ನಗರ ಮಂಡಲದ ವತಿಯಿಂದ ರಕ್ತದಾನ ಶಿಬಿರ ನಡೆಯಿತು.
ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕ್‌ನಲ್ಲಿ ನಡೆದ ಈ ಶಿಬಿರದಲ್ಲಿ ಯುವಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವವನ್ನು ಸಾರಿದರು. ಸೇವಾ ಮನೋಭಾವದೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ಭಾಗವಹಿಸಿ, ಅಗತ್ಯವಿರುವ ರೋಗಿಗಳಿಗೆ ನೆರವಾಗುವ ಸಂದೇಶವನ್ನು ನೀಡಿದರು.

Advertisement

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಸಾಜ ರಾಧಾಕೃಷ್ಣ ಆಳ್ವ, ಜೀವಂಧರ್ ಜೈನ್, ಪುರುಷೋತ್ತಮ ಮುಂಗ್ಲಿಮನೆ, ಸುರೇಶ್ ಆಳ್ವ, ಪುತ್ತೂರು ಬಿಜೆಪಿ ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ಕಲ್ಲೇಗ, ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಪೆರ್ವೋಡಿ ಸೇರಿದಂತೆ ಯುವಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಹಾಗೂ ರೋಟರಿ ಬ್ಲಡ್ ಬ್ಯಾಂಕ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸೇವಾ ಸಂಕಲ್ಪ ಅಭಿಯಾನದ ಮೂಲಕ ರಕ್ತದಾನದ ಮಹತ್ವ ಸಾರಿದ ಪುತ್ತೂರು ಬಿಜೆಪಿ ಯುವಮೋರ್ಚಾದ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page