ಪುತ್ತೂರು : ಸಂಟ್ಯಾರ್ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದ್ದು, ಅತಿವೇಗ ಮತ್ತು ಓವರ್‌ಟೇಕ್ ಭರದಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯು ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದ್ದು, ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯ ಪರಿಣಾಮ ಸಂಟ್ಯಾರಿನಲ್ಲಿ ಸಂಪೂರ್ಣ ರಸ್ತೆ ತಡೆ ಉಂಟಾಗಿದ್ದು (ಬ್ಲಾಕ್), ವಾಹನಗಳು ಸಾಲುಗಟ್ಟಿ ನಿಂತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಗಮಗೊಳಿಸಿದರು ಎಂದು ಮೂಲಗಳಿಂದ ತಿಳಿದು ಬಂದಿದೆ.














