ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರ್‌ ಡಿಕ್ಕಿ! ಕಾರಿನಲ್ಲಿದ್ದ ಪ್ರಯಾಣಿಕ ಸಾವು, ಚಾಲಕ ಆಸ್ಪತ್ರೆಗೆ ದಾಖಲು!!

ಕಡಬ : ಇಲ್ಲಿನ ನೆಲ್ಯಾಡಿ ಐಟಿಐ ಕಾಲೇಜಿನ ಮುಂಭಾಗದಲ್ಲಿ ಹಾಸನದಿಂದ ಮಂಗಳೂರು ಕಡೆಗೆ ಹೋಗುವ ಏಕಮುಖ ಹೆದ್ದಾರಿಯ ಬದಿಯಲ್ಲಿ ನಿಂತುಕೊಂಡಿದ್ದ ಟಿಎನ್‌-88-ಎ-9477ನೇ ಟ್ಯಾಂಕರ್‌ ಲಾರಿಯ ಹಿಂಬದಿಗೆ ಹಾಸನ ಕಡೆಯಿಂದ ಬಂದ ಕೆಎ-22-ಎಂಎ-5270 ನೇ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ.

Advertisement

ಕೂಡಲೇ ವಿ ಜೆ ಜೋಸೆಫ್‌ ಅಲ್ಲಿ ಸೇರಿದ ಸಾರ್ವಜನಿಕರ ಸಹಾಯದಿಂದ ಇಬ್ಬರನ್ನು ಚಿಕಿತ್ಸೆ ಬಗ್ಗೆ ನೆಲ್ಯಾಡಿಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸಹಪ್ರಯಾಣಿಕನನ್ನು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಡಪಡಿಸಿದ್ದು, ಕಾರಿನ ಚಾಲಕನನ್ನು ಒಳರೋಗಿಯನ್ನಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿರುತ್ತಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 138/2026 ಕಲಂ: 281, 106 BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page