ವೈದ್ಯರ ನಿರ್ಲಕ್ಷ್ಯದಿಂದ ಒಂದು ವರ್ಷದ ಮಗು ಮೂರು ತಿಂಗಳು ಕೋಮಾದಲ್ಲಿ! ಕಿವಿಗೆ ನಡೆಸಿದ ಶಸ್ತ್ರಚಿಕಿತ್ಸೆಯೇ ಮುಳುವಾಯಿತೇ??

ಬೆಂಗಳೂರು : ಕಿವಿ ಗಾಯದಿಂದಾಗಿ ನಾಗರಬಾವಿ ಕ್ಲೌಡ್‌ನೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಒಂದು ವರ್ಷದ ಮಗು ವೈದ್ಯರ ನಿರ್ಲಕ್ಷ್ಯದಿಂದ ಕಳೆದ ಮೂರು ತಿಂಗಳಿಂದ ಕೋಮಾದಲ್ಲಿರುವಂತಾಗಿದೆ ಎಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

Advertisement

ನಾಗರಬಾವಿಯ ಆಸ್ಪತ್ರೆ ಬಳಿ ಮಗುವಿನ ಕುಟುಂಬಸ್ಥರು ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ ನೀಡಿದ್ದು, ಪೊಲೀಸರು ಭೇಟಿ ನೀಡಿ ಮನವೊಲಿಸಲು ನಡೆಸಿದ ಯತ್ನ ವಿಫಲವಾಗಿದೆ. ಮಗುವಿಗೆ ಕಿವಿಗೆ ಗಾಯವಾಗಿದ್ದು ಸಣ್ಣ ಶಸ್ತ್ರಚಿಕಿತ್ಸೆಗೆ ದಾಖಲಾಗಿಸಲಾಗಿತ್ತು. ಈ ವೇಳೆ ನೀಡಿದ ಅನಸ್ತೇಶಿಯಾದಿಂದ ಮಗು ಪ್ರಜ್ಞೆ ತಪ್ಪಿ ಕೋಮಾಗೆ ಹೋಗಿದ್ದು, ಇದು ವೈದ್ಯರ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಪೋಷಕರು ಆರೋಪಿಸಿದ್ದರು. ಈ ಸಂಬಂಧ ಪೋಷಕರು ಹಿಂದೆ ಕೆಎಂಸಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಸಿವಿ ರಾಮನ್ ಜನರಲ್ ಆಸ್ಪತ್ರೆಯ ಡಾ.ರಘುನಾಥ್ ನೇತೃತ್ವದ ವೈದ್ಯರ ತಂಡ ಆಸ್ಪತ್ರೆಗೆ ಭೇಟಿ ನೀಡಿದೆ. ಭೇಟಿ ವೇಳೆ ಮೇಲ್ನೋಟಕ್ಕೆ ವೈದ್ಯರ ಲೋಪ ಪತ್ತೆಯಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಯಿಂದ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಕೆ ಮಾಡಲಾಗಿದ್ದು, ಆಸ್ಪತ್ರೆಯಲ್ಲೇ ಮಗುವಿಗೆ ಉಚಿತ ಚಿಕಿತ್ಸೆ ನೀಡುವಂತೆ ಡಿಎಚ್‌ಒ ಸೂಚಿಸಿದ್ದಾರೆ ಎಂದು ಜಾಲತಾಣ ಮೂಲಗಳು ವರದಿ ಮಾಡಿವೆ.

Advertisement
Advertisement

ಇನ್ನು ಈವರೆಗೆ ಮಗುವಿನ ಸ್ಥಿತಿ ಬಗ್ಗೆ ಆಸ್ಪತ್ರೆಯವರು ಸೂಕ್ತ ಮಾಹಿತಿ ನೀಡುತ್ತಿಲ್ಲ. ಜತೆಗೆ ತಪ್ಪಿತಸ್ಥ ವೈದ್ಯರ ಕ್ರಮವಾಗಿಲ್ಲ ಎಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page