ಕಸ್ತೂರಿರಂಗನ್‌ ವರದಿ ಬಗ್ಗೆ ಮಹತ್ವದ ಚರ್ಚೆ!ಸ್ಥಳೀಯರ ಅಭಿಪ್ರಾಯಕ್ಕೆ ಮೊದಲ ಆದ್ಯತೆ ಎಂದ ಸಿಎಂ

ಉಡುಪಿ : ಜಿಲ್ಲೆಯ ಹೆಬ್ರಿಯಲ್ಲಿ ಶುಕ್ರವಾರ ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮವಲಯದ ನಿಯಮಗಳ ಕುರಿತು ಮಹತ್ವದ ಚರ್ಚೆ ನಡೆಯಿತು. ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ತೆರಳಿ, ವರದಿಯಿಂದಾಗಿ ಎದುರಾಗಬಹುದಾದ ಸಮಸ್ಯೆಗಳ ಕುರಿತು ಸ್ಥಳೀಯರು, ಕೃಷಿಕರು ಹಾಗೂ ಜನಪ್ರತಿನಿಧಿಗಳಿಂದ ನೇರವಾಗಿ ಮಾಹಿತಿ ಪಡೆದುಕೊಂಡರು.

Advertisement

ಕಸ್ತೂರಿರಂಗನ್ ವರದಿಯ ವ್ಯಾಪ್ತಿ ಹಾಗೂ ಅದರ ಅನುಷ್ಠಾನದಿಂದ ಜನಜೀವನದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಿತು. ಈ ವಿಚಾರದಲ್ಲಿ ಸ್ಥಳೀಯರ ಅಭಿಪ್ರಾಯಕ್ಕೆ ಆದ್ಯತೆ ನೀಡೋದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಭರವಸೆ ನೀಡಿದರು. ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದು, ಅಂತಿಮ ನಿಲುವು ರೂಪಿಸುವ ಮೊದಲು ಜನರ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು. ‘ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯ’ ಎಂದು ಸಿಎಂ ಡಿಕೆಶಿ ಹೇಳಿದರು.

Advertisement
Advertisement

ಈ ಸಂದರ್ಭದಲ್ಲಿ ಕಸ್ತೂರಿರಂಗನ್ ವರದಿಯ ವ್ಯಾಪ್ತಿಯನ್ನು ಸ್ಪಷ್ಟವಾಗಿ ಗುರುತಿಸಲು ಭೌತಿಕ ಸಮೀಕ್ಷೆ ನಡೆಸಬೇಕು ಎಂಬ ಬೇಡಿಕೆಯೂ ಸಭೆಯಲ್ಲಿ ಕೇಳಿಬಂತು. ಉಪಗ್ರಹ ಚಿತ್ರಗಳ ಆಧಾರದ ಮೇಲೆ ಗುರುತಿಸಲಾದ ಪ್ರದೇಶಗಳಲ್ಲಿ ಕೃಷಿಭೂಮಿ, ತೋಟಗಳು ಹಾಗೂ ಜನವಸತಿ ಪ್ರದೇಶಗಳು ಸೇರಿಕೊಳ್ಳುವ ಸಾಧ್ಯತೆಯ ಬಗ್ಗೆ ಸ್ಥಳೀಯರು ಕಳವಳ ವ್ಯಕ್ತಪಡಿಸಿದರು. ಗ್ರಾಮವಾರು ಪರಿಶೀಲನೆ ನಡೆಸಿ ವಾಸ್ತವ ಪರಿಸ್ಥಿತಿಯನ್ನು ದಾಖಲಿಸಬೇಕು ಹಾಗೂ ತಜ್ಞರ ಸಮಿತಿ ರಚಿಸಬೇಕು ಎಂಬ ಸಲಹೆಗಳೂ ಕೇಳಿಬಂದವು.

ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಜನವಸತಿ ಪ್ರದೇಶಗಳನ್ನು ವರದಿಯ ವ್ಯಾಪ್ತಿಯಿಂದ ಹೊರಗಿಡುವಂತೆ ಆಗ್ರಹಿಸಿದರು. ಹಲವು ವರ್ಷಗಳಿಂದ ಅರಣ್ಯ ಸಂಬಂಧಿತ ನಿಯಮಗಳಿಂದ ಈ ಭಾಗದ ಜನರು ಸಮಸ್ಯೆ ಎದುರಿಸುತ್ತಿದ್ದು, ಇದೀಗ ಕಸ್ತೂರಿರಂಗನ್ ವರದಿಯ ವಿಚಾರ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು. ಕೇರಳದ ಮಾದರಿಯಲ್ಲಿ ಭೌತಿಕ ಸಮೀಕ್ಷೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ಈ ವಿಚಾರದಲ್ಲಿ ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ ಎಂದರು. ಕೇರಳದಲ್ಲಿ ತಜ್ಞರ ಸಮಿತಿ ಮೂಲಕ ನಡೆಸಿದ ಸಮೀಕ್ಷೆಯ ಮಾದರಿಯನ್ನು ಕರ್ನಾಟಕದಲ್ಲೂ ಪರಿಗಣಿಸಬೇಕು ಎಂದು ಸಲಹೆ ನೀಡಿದರು. ಕಾಡು ಮತ್ತು ಜನವಸತಿ ಪ್ರದೇಶಗಳ ನಡುವಿನ ಗಡಿಯನ್ನು ವಾಸ್ತವ ಪರಿಸ್ಥಿತಿಯ ಆಧಾರದಲ್ಲಿ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page