ಆರನೇ ಮಹಡಿಯಿಂದ ಬಿದ್ದು 20 ವರ್ಷದ ಯುವತಿ ಆತ್ಮಹತ್ಯೆ! “ಐ ಲವ್ ಯೂ ಡ್ಯಾಡ್, ಐ ಲವ್ ಯೂ ಮಾಮ್” ಕೊನೆಯ ಸಂದೇಶ!!

ಬೆಂಗಳೂರು ಗ್ರಾಮಂತರ ತಾಲೂಕಿನ ನಾಗದೇನಹಳ್ಳಿ ಸಮೀಪದಲ್ಲಿರುವ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಶುಕ್ರವಾರ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಆಂಧ್ರಪ್ರದೇಶದ ಗುಂತಕಲ್ ಮೂಲದ ವರ್ಷಿತಾ (20) ಎಂದು ಗುರುತಿಸಲಾಗಿದೆ.
ವರ್ಷಿತಾ ಸಾವಿಗೂ ಮುನ್ನ ತಮ್ಮ ಮೊಬೈಲ್‌ನಿಂದ ಪೋಷಕರಿಗೆ ‘ಐ ಲವ್ ಯೂ ಡ್ಯಾಡ್, ಐ ಲವ್ ಯೂ ಮಾಮ್’ ಎಂದು ಸಂದೇಶ ಕಳುಹಿಸಿದ್ದಾಳೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ವರ್ಷಿತಾ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಕಳೆದ ಎರಡು ದಿನಗಳಿಂದ ಅವರು ಆಹಾರ ಸೇವಿಸಿರಲಿಲ್ಲ ಎನ್ನಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Advertisement

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page