ಮಾಜಿ ಸಿಎಂ ಸಿದ್ದು ವಿಡಿಯೋಗೆ ತಡೆಯಾಜ್ಞೆ!‌ ರಾಜಕೀಯ ಚರ್ಚೆಗೆ ಕಾರಣವಾದ ವಿಡಿಯೋ ಬಾಂಬ್!!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್‌ ಆಪರೇಷನ್‌ ವಿಡಿಯೋ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದೆಂದು ಹೇಳಲಾಗುತ್ತಿರುವ ವಿಡಿಯೋ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಮತ್ತೊಂದೆಡೆ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದಡಿ ಇಬ್ಬರನ್ನು ಸೆಂಟ್ರಲ್ ಸೈಬರ್ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್‌ ಆಪರೇಷನ್‌ ವಿಡಿಯೋ ಪ್ರಸಾರಕ್ಕೆ ತಡೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ತಮ್ಮ ತೇಜೋವಧೆ ಮಾಡುವ ಉದ್ದೇಶದಿಂದ ವಿಡಿಯೋವನ್ನು ಪ್ರಸಾರ ಮಾಡುವ ಸಾಧ್ಯತೆಯಿದೆ ಎಂಬ ಆತಂಕದ ಹಿನ್ನೆಲೆ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿದ್ದರು ಎನ್ನಲಾಗಿದೆ. ಈ ಸಂಬಂಧ ನಿನ್ನೆಯಷ್ಟೇ ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಸಿದ್ದರಾಮಯ್ಯ ಪರವಾಗಿ ವಕೀಲ ಪ್ರವೀಣ್ ಕಾಮತ್ ಅವರು 18ನೇ ಸಿಸಿಹೆಚ್‌ (CCH) ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದರು ಎಂದು ತಿಳಿದುಬಂದಿದೆ.

Advertisement

ವಿಡಿಯೋದಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಿ ಸಾರ್ವಜನಿಕವಾಗಿ ತಮ್ಮ ಪ್ರತಿಷ್ಠೆಗೆ ಧಕ್ಕೆ ಉಂಟುಮಾಡುವ ಪ್ರಯತ್ನ ನಡೆಯುತ್ತಿದೆ ಎಂಬುದು ಸಿದ್ದರಾಮಯ್ಯ ಅವರ ಆಕ್ಷೇಪವಾಗಿದೆ. ಈ ಹಿನ್ನೆಲೆ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page