ಮಂಗಳಮುಖಿಯರ ಉಪಟಳಕ್ಕೆ ದ.ಕ. ಜಿಲ್ಲಾಧಿಕಾರಿ ಬ್ರೇಕ್!‌ ದಕ್ಷಿಣ ಕನ್ನಡದಲ್ಲಿ ಕಠಿನ ಕ್ರಮಕ್ಕೆ ಸೂಚನೆ!!

ಮಂಗಳೂರು: ತಡರಾತ್ರಿ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಆಸುಪಾಸಿನಲ್ಲಿ ಮಂಗಳಮುಖಿಯರು ಗುಂಪುಗೂಡುವುದನ್ನು ತಡೆಯಲು ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಅಧಿಕಾರಿಗಳು ಹಾಗೂ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾಮಟ್ಟದ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಕೆಲವು ನಿರ್ಧಾರಗಳನ್ನು ಕೈಗೊಂಡರು.

Advertisement
Advertisement

ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ನಿಂತು ವಾಹನ ಸವಾರರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದಿವೆ. ಆರಂಭಿಕ ಹಂತದಲ್ಲಿ ಹೆದ್ದಾರಿ ಬದಿಗಳಲ್ಲಿ ನಿಲ್ಲದಂತೆ ತಿಳುವಳಿಕೆ ನೀಡಿ ಜಾಗೃತಿ ಮೂಡಿಸಬೇಕು. ದೂರುಗಳು ಮುಂದುವರಿದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿದ್ದ ಮಂಗಳಮುಖಿ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿ, ನೆರೆ ರಾಜ್ಯಗಳಿಂದ ಬರುವ ಕೆಲ ವ್ಯಕ್ತಿಗಳು ಮಂಗಳೂರಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ನಾರ್ವಡೆ ವಿನಾಯಕ್ ಕರ್ಬಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ವಿವಿಧ ಇಲಾಖಾಧಿಕಾರಿಗಳು ಹಾಗೂ ಮಂಗಳಮುಖಿ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page