ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಅ.22ರ ಗುರುವಾರ ರಜೆ ಎಂದು ಘೋಷಣೆಯಾಗಿದೆ.ನವರಾತ್ರಿ ಉತ್ಸವದ ಕೊನೆಯ ದಿನದಂದು (ಅ.21) ತಡರಾತ್ರಿಯವರೆಗೆ ಕಾರ್ಯಕ್ರಮವಿರುವ ಕಾರಣ ವಿದ್ಯಾರ್ಥಿಗಳಿಗೆ ಮರುದಿನ (ಅ.22) ಶಾಲೆಗಳಿಗೆ ತೆರಳಲು ಸಮಸ್ಯೆಯಾಗಲಿದೆ. ಹಾಗಾಗಿ ಈ ಬಗ್ಗೆ ಪರಿಶೀಲಿಸಬೇಕು ಎಂದು ಸಾರ್ವಜನಿಕರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ರ ಗಮನ ಸೆಳೆದಿದ್ದರು.ಆ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮ ಜರಗಿಸುವಂತೆ ಸಚಿವ ಖಾದರ್ ದ.ಕ.ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಅದರಂತೆ ಅ.22ರ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ ಮತ್ತು ಸರಕಾರಿ ಶಾಲೆಗಳಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾಗಿ ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡದ ಎಲ್ಲಾ ಶಾಲೆಗಳಿಗೆ ನಾಳೆ ರಜೆ! ದ.ಕ ಮಹತ್ವದ ಆದೇಶ!!
Share this article
Subscribe
By pressing the Subscribe button, you confirm that you have read our Privacy Policy.













