ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಪರಮೇಶ್ವರ್ ಅನಾರೋಗ್ಯಕ್ಕೆ ಒಳಗಾದ ಹಿನ್ನಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ ಎಂದು ಮೂಲಗಳು ಹೇಳಿವೆ.













