ಕಾರ್ಕಳ : ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಮಾನಾಥ ರೈ ಸೇರಿ ಹಲವು ಮಂದಿ ಗಾಯಗೊಂಡಿದ್ದಾರೆ.

ಕಾರ್ಕಳ ಮೂಡುಬಿದ್ರೆ ಹೈವೇ ರಸ್ತೆಯ ಸಾಣೂರು ಜಂಕ್ಷನ್ ನಲ್ಲಿ ಕಾರ್ಕಳದಿಂದ ಮೂಡುಬಿದ್ರೆಯತ್ತ ಪಯಣಿಸುತ್ತಿದ್ದ ಬಸ್ಸು, ಮಾಜಿ ಸಚಿವ ರಮಾನಾಥ ರೈ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳೀಯರು ರಮನಾಥ ರೈ ಅವರನ್ನು ಹರಸಾಸಪಟ್ಟು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿದ್ದ ಮತ್ತು ಕಾರಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಈ ಸಮಯದಲ್ಲಿ ಗಾಯಗಳಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.














