ಪುತ್ತೂರು : ಇಲ್ಲಿನ ಲಾಡ್ಜ್ ಒಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನಿಗೆ ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿರುವ ಘಟನೆ ಅ.17ರಂದು ರಾತ್ರಿ ಪುತ್ತೂರಿನಲ್ಲಿ ನಡೆದಿದೆ. ಕಡಬದಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ(27) ಹಲ್ಲೆ ಗೊಳಗಾದವರು. ಇವರು ಪುತ್ತೂರಿನ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು.
ರಾತ್ರಿ ಲಾಡ್ಜ್ನಲ್ಲಿದ್ದ ವೇಳೆ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಅಲ್ಲಿಗೆ ಬಂದು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಮ್ಮದ್ ರಿಫಾಯಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.














