ದೆಹಲಿಯ ಸಂಸತ್‌ ಭವನದ ನಾರ್ತ್‌ ಬ್ಲಾಕ್‌ನಲ್ಲಿ ಅಗ್ನಿ ಅವಘಡ! ಶಾರ್ಟ್‌ ಸರ್ಕಿಟ್‌ನಿಂದ ದುರಂತ!!

ದೆಹಲಿಯ ಸಂಸತ್‌ ಭವನದ ನಾರ್ತ್‌ ಬ್ಲಾಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದ ನವೀಕರಣ ಕಾಮಗಾರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

Advertisement

ವೆಲ್ಡಿಂಗ್‌ ಕಾರ್ಯ ಮಾಡುವ ವೇಳೆ ಶಾರ್ಟ್‌ ಸರ್ಕೀಟ್‌ ಉಂಟಾಗಿದ್ದು, ಕಿಡಿ ಹಾರಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಬೆಂಕಿಯಿಂದಾಗಿ ದಟ್ಟ ಕಪ್ಪು ಹೊಗೆ ಕಾಣಿಸಿಕೊಂಡಿದ್ದು, ಸುತ್ತಮುತ್ತ ಜನ ಆತಂಕದಲ್ಲಿದ್ದರು. ಆಕಾಶದಲ್ಲಿ ಕಾಣಿಸಿಕೊಂಡ ದಟ್ಟ ಹೊಗೆಯಿಂದಾಗಿ ಪರಿಸ್ಥಿತಿ ಗಂಭೀರವಾಗಿತ್ತು. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ಧಾವಿಸಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

Advertisement
Advertisement

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದಾರೆ. ನವೀಕರಣ ಕಾರ್ಯದ ವೇಳೆ ಉಂಟಾದ ಈ ಅಗ್ನಿ ಅವಘಡದಿಂದ ಯಾವುದೇ ದೊಡ್ಡ ಪ್ರಮಾಣದ ಹಾನಿ ಅಥವಾ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page