ಬೆಳ್ತಂಗಡಿ : ನಾವೂರು ಪೇಟೆ ಬಳಿಯ ಸ್ವಾತಿ ಕಟ್ಟಡದಲ್ಲಿ ವೈದ್ಯ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ನಾವೂರು ನಿವಾಸಿ ರವಿ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಶಂಕಿತರಾದ ನಾವೂರು ನಿವಾಸಿ ಸುರೇಶ್ ಇಂಚರ ಮತ್ತು ಪುತ್ತೂರಿನ ಕೌಡಿಚ್ಚಾರು ನಿವಾಸಿ ದಿನೇಶ್ ಪ್ರಭು ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಅ.6ರಂದು ದುಷ್ಕರ್ಮಿಗಳು ಕ್ಲಿನಿಕ್‌ಗೆ ಡೀಸೆಲ್ ಸುರಿದು ಸುಟ್ಟು ಹಾಕುವ ಪ್ರಯತ್ನ ಮಾಡಿದ್ದರು. ಇದನ್ನು ಜನಪ್ರತಿನಿಧಿಗಳು ಸೇರಿದಂತೆ ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದರು.














