ಪುತ್ತೂರು: ಸೆ. 28ರಂದು ಬಿ.ಸಿ. ರೋಡ್ನಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ವತಿಯಿಂದ ನಡೆಯಲಿರುವ ಬೃಹತ್ ಪ್ರತಿಭಟನೆ ಬಿ.ಸಿ ರೋಡ್ ಚಲೋಗೆ ಪುತ್ತೂರು ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದ್ದಾರೆ.
ಪುತ್ತೂರಿನ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಹಿಂದೂಗಳನ್ನು ದಮನಿಸುವ ಷಡ್ಯಂತ್ರವನ್ನು ಖಂಡಿಸಲಿದ್ದೇವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













