ಗೋವಾದ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ! 150ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!!

ಗೋವಾದ ಬಂದರು ಪಟ್ಟಣ ವಾಸ್ಕೊದಲ್ಲಿರುವ ಮಾರುಕಟ್ಟೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 150ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

Advertisement

ಬುಧವಾರ ಮಧ್ಯರಾತ್ರಿ ಸುಮಾರಿಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಾರುಕಟ್ಟೆಯ ಅಂಗಡಿಗಳು ಹಾಗೂ ಅಲ್ಲಿದ್ದ ವಸ್ತುಗಳಿಗೆ ವ್ಯಾಪಕ ಹಾನಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಗ್ನಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕರು ಹಾಗೂ ರಾಜ್ಯ ಸಚಿವರೊಂದಿಗೆ ಸ್ಥಳಕ್ಕೆ ಧಾವಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ಬೆಂಕಿಯಿಂದ 150ಕ್ಕೂ ಹೆಚ್ಚು ಅಂಗಡಿಗಳು ಸಂಪೂರ್ಣ ಸುಟ್ಟುಹೋಗಿವೆ ಎಂದು ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದರು. “ಈ ಘಟನೆ ದುರದೃಷ್ಟಕರ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ದಾಸ್ತಾನು ಮಾಡಿಕೊಂಡಿದ್ದ ವ್ಯಾಪಾರಿಗಳು ಭಾರಿ ನಷ್ಟ ಅನುಭವಿಸಿದ್ದಾರೆ. ಹಾನಿಗೊಳಗಾದ ಅಂಗಡಿಗಳ ಮಾಲಕರಿಗೆ ರಾಜ್ಯ ಸರಕಾರದಿಂದ ಆರ್ಥಿಕ ನೆರವು ನೀಡಲಾಗುವುದು” ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಾಲತಾಣ ಮೂಲಗಳು ಹೇಳಿವೆ.

Advertisement
Advertisement

ಬುಧವಾರ ರಾತ್ರಿ ಸುಮಾರು 10.30ಕ್ಕೆ ವಾಸ್ಕೊ ಹೊರವಲಯದ ಮನೆಯೊಂದರಲ್ಲಿ ಮೊದಲ ಅಗ್ನಿ ಅವಘಡ ಸಂಭವಿಸಿತ್ತು. ಬಳಿಕ ಗ್ಯಾರೇಜ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ವಾಹನಗಳು ಸುಟ್ಟು ಹೋಗಿವೆ. ಇದಾದ ಕೆಲವೇ ನಿಮಿಷಗಳಲ್ಲಿ ಪಟ್ಟಣದ ಪ್ರಮುಖ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ವ್ಯಾಪಾರಿಗಳು ತಮ್ಮ ಅಂಗಡಿಗಳಲ್ಲಿದ್ದ ಸರಕುಗಳನ್ನು ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page