ಶೃಂಗೇರಿ : ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮದುವೆಯಾಗಿ ಕೇವಲ ಐದು ದಿನಗಳಾಗಿದ್ದ ನವವಿವಾಹಿತ ಮೃತಪಟ್ಟಿರುವ ದಾರುಣ ಘಟನೆ ಶೃಂಗೇರಿ ತಾಲೂಕಿನ ಮೆಣಸೆ ಬಳಿ ಸೋಮವಾರ (ಅ.26) ನಡೆದಿದೆ.
ಕುಂಚೇಬೈಲು ನಿವಾಸಿ ನಾಗರಾಜ್ (32) ಮೃತ ದುರ್ದೈವಿ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆ ಮಧ್ಯೆಯೇ ಹೊತ್ತಿ ಉರಿದಿದ್ದು, ಸವಾರನಿಗೂ ಬೆಂಕಿ ತಗುಲಿ ಗಂಭೀರವಾಗಿ ಸುಟ್ಟು ಮೃತಪಟ್ಟಿದ್ದಾರೆ. ಜಯಪುರದಿಂದ ಶೃಂಗೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಅಪಘಾತದ ಬಳಿಕ ರಸ್ತೆ ಬದಿಯ ಕಂದಕಕ್ಕೆ ಇಳಿದಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.













