ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ದೆಹಲಿ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಬೆಳಗಿನ ಕಚೇರಿ ಸಮಯದಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದು ಬಂದಿದೆ.
ದೆಹಲಿ ಮಾತ್ರವಲ್ಲದೆ ನೋಯ್ಡಾ, ಗುರುಗ್ರಾಮ ಮತ್ತು ಗಾಜಿಯಾಬಾದ್ನಲ್ಲೂ ಭಾರಿ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಗಂಟೆಗೆ 15 ಮಿ.ಮೀ. ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಅಲ್ಲದೆ, ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಲಾಗಿದೆ.
ಸಾರ್ವಜನಿಕರು ಅನಗತ್ಯವಾಗಿ ಹೊರಬರದೆ, ಮರದ ಕೆಳಗೆ ಅಥವಾ ದುರ್ಬಲ ಕಟ್ಟಡಗಳ ಹತ್ತಿರ ನಿಲ್ಲದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.













