ಭಾರತೀಯ ನೌಕಾಪಡೆ ಸಿಬ್ಬಂದಿ ಪಾಕಿಸ್ತಾನದ ಗುಪ್ತಚರ ಜಾಲದೊಂದಿಗೆ ಸಂಪರ್ಕ! ಅನೇಕ ಸೂಕ್ಷ್ಮ ವಿಚಾರಗಳನ್ನು ಪಾಕಿಸ್ತಾನದೊಂದಿಗೆ ರವಾನಿಸಿದ ದೇಶದ್ರೋಹಿ!!

31 ವರ್ಷದ ನೌಕಾಪಡೆ ಸಿಬ್ಬಂದಿಯೊಬ್ಬರನ್ನು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಪಾಕಿಸ್ತಾನದ ಗುಪ್ತಚರ ಜಾಲದೊಂದಿಗೆ ಸಂಪರ್ಕ ಹೊಂದಿ ಭಾರತೀಯ ನೌಕಾಪಡೆಯ ಸೂಕ್ಷ್ಮಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧಿತನನ್ನು ಪ್ರದೀಪ್ ಮುಖರ್ಜಿ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ವಿಶಾಖಪಟ್ಟಣಂನಲ್ಲಿರುವ ಪೂರ್ವ ನೌಕಾ ಕಮಾಂಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರದೀಪ್, ಶನಿವಾರ ಕೊಯಮತ್ತೂರಿನ ಐಎನ್‌ಎಸ್ ಅಗ್ರಣಿಯಲ್ಲಿ ಮ್ಯಾನೇಜ್‌ಮೆಂಟ್ ಡೆವಲಪ್‌ಮೆಂಟ್ ಕೋರ್ಸ್‌ಗೆ ಹಾಜರಾಗಿದ್ದಾಗ ಅವರನ್ನು ಬಂಧಿಸಲಾಗಿದ್ದು, ಗಂಭೀರ ಸ್ವರೂಪದ ಗುಪ್ತಚರ ಚಟುವಟಿಕೆಗಳ ಕುರಿತು ತನಿಖೆಯು ಮುಂದುವರಿದಿದೆ ಎಂದು ಜಾಲತಾಣ ಮೂಲಗಳು ವರದಿ ಮಾಡಿವೆ.

Advertisement

ಅಧಿಕಾರಿಗಳ ಪ್ರಕಾರ, ಪಾಕಿಸ್ತಾನಿ ಮಹಿಳಾ ಏಜೆಂಟ್‌ನೊಂದಿಗೆ ಪ್ರದೀಪ್ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕ ಬೆಳೆಸಿಕೊಂಡಿದ್ದರು. ಕಳೆದ ಕೆಲವು ತಿಂಗಳಿಂದ ಇವರಿಬ್ಬರ ನಡುವೆ ಸಂಪರ್ಕವಿದ್ದು, ಈ ಅವಧಿಯಲ್ಲಿ ನೌಕಾಪಡೆಯ ಕಾರ್ಯಾಚರಣೆ, ವಿಶಾಖಪಟ್ಟಣಂ ನೌಕಾ ನೆಲೆ ಹಾಗೂ ವ್ಯೂಹಾತ್ಮಕ ಸಂಪನ್ಮೂಲಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿರುವ ಆರೋಪ ಕೇಳಿಬಂದಿದೆ. ನೌಕಾಪಡೆಯ ಹಡಗುಗಳ ಕಾರ್ಯಾಚರಣಾ ಮತ್ತು ಚಲನವಲನ ವ್ಯವಸ್ಥೆಗೆ ಸಂಬಂಧಿಸಿದ ಮಾಹಿತಿಯೂ ಸೋರಿಕೆಯಾಗಿರುವ ಶಂಕೆ ಇದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page