ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ. ಇಲ್ಲಿನ ಬೈಪಾಸ್ ರಸ್ತೆಯ ದುಗ್ಗಮ್ಮ-ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ರಸ್ತೆಯಲ್ಲೇ ಎರಡು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ನಸುಕಿನ ವೇಳೆ ರಸ್ತೆಯಲ್ಲಿ ಎರಡು ಕಾಡುಕೋಣಗಳು ನಿಂತಿರುವುದು ಗಮನಕ್ಕೆ ಬಂದಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಕೆಲಕಾಲ ಆತಂಕಗೊಂಡರು. ಕಾಡುಕೋಣಗಳು ಪೇಟೆ ಪ್ರದೇಶದತ್ತ ಆಗಮಿಸಿರುವುದು ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ.
ಅರಣ್ಯ ಪ್ರದೇಶದಿಂದ ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡುಕೋಣಗಳು ಜನವಸತಿ ಪ್ರದೇಶಗಳತ್ತ ಬರುತ್ತಿರುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಈ ಬಗ್ಗೆ ಗಮನಹರಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.











