ಕರ್ನಾಟಕ ರಕ್ಷಣಾ ವೇದಿಕೆಯ ಆಶ್ರಯದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ “ಕನ್ನಡಿಗರ ಬಿನ್ನವತ್ತಳೆ ಸಮರ್ಪಣೆ” ಸೆಪ್ಟೆಂಬರ್ 19 ಶನಿವಾರ ಸಂಜೆ ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿಯ ಪ್ರೆಸ್ಟೀಜ್ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ. ನಾರಾಯಣ ಗೌಡ ಅವರ ನೇತೃತ್ವದಲ್ಲಿ ಈ ಅದ್ಧೂರಿ ಸಮಾರಂಭ ನಡೆಯಿತು.

ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಬೆಂಗಳೂರಿನ ಕೋಣನಕುಂಟೆ ಕ್ರಾಸ್‌ನ ಪ್ರೆಸ್ಟೀಜ್ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಅಭಿನಂದನಾ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರಿಗೆ “ಕನ್ನಡಿಗರ ಬಿನ್ನವತ್ತಳೆ” ಸಮರ್ಪಿಸಿ, ನಾಡಿನ ಸಾಧಕರಿಗೆ ‘ಕರ್ನಾಟಕ ಸಾರ್ವಭೌಮ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ನಾಡಿನ ಜಲ, ನೆಲ, ಭಾಷೆ ಹಾಗೂ ಸಂಸ್ಕೃತಿಯ ರಕ್ಷಣೆಗೆ ಸದಾ ಮುಂಚೂಣಿಯಲ್ಲಿ ನಿಂತು, ರಾಜ್ಯದ ಸಮಗ್ರ ಅಭಿವೃದ್ಧಿಗೆ ದಣಿವರಿಯದೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಹಾಗೂ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಗೋವಿಂದ ರಬಾಬು ಪೂಜಾರಿ, ಸ್ವಸ್ತಿಕ ಆರ್ಯ, ಯು.ಟಿ. ಖಾದರ್, ಎನ್.ಎ. ಹ್ಯಾರೀಸ್ ಸೇರಿ ಹಲವು ಸಾಧರಿಗೆ ಕನ್ನಡ ಸಾರ್ವಭೌಮ ಪ್ರಶಸ್ತಿ 2026 ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರಾದ ಶ್ರೀ ಯು. ಟಿ. ಖಾದರ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ. ಹ್ಯಾರಿಸ್, ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರು ಸೇರಿದಂತೆ ಸ್ವಾಮೀಜಿಗಳು, ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಜೊತೆಗೆ ಟಿ.ಎ. ನಾರಾಯಣಗೌಡರ ಕನ್ನಡ ಕಾಯಕ ನಾಲ್ಕು ದಶಕದ ಹಿನ್ನಲೆಯಲ್ಲಿ 40 ಪುಸ್ತಕಗಳ ಲೋಕಾರ್ಪಣೆಯೂ ನಡೆಯಿತು.













