ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ, ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ದಕ್ಷತಾ ಪದಕ ಲಭಿಸಿದೆ.
ಸಿಐಡಿ ಹಾಗೂ ಎಸ್‌ಐಟಿ ಅಧಿಕಾರಿಗಳ ಸಹಿತ ರಾಜ್ಯದ ಆರು ಪೊಲೀಸ್ ಅಧಿಕಾರಿಗಳು ದಕ್ಷತಾ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಪದಕಕ್ಕೆ ಭಾಜನರಾದವರಲ್ಲಿ ಬೆಂಗಳೂರು ನಗರದ ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶೋಭಾ ಎನ್., ಬೆಂಗಳೂರು ಪ್ರಧಾನ ಕಚೇರಿಯ ಇನ್ಸ್‌ಪೆಕ್ಟರ್ ಎಂ. ಶ್ರೀನಿವಾಸ ರಾವ್, ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್, ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾವುದ್ದೀನ್ ರುಕ್ಷುದ್ದೀನ್ ಗಡೇಕರ್, ಬೆಂಗಳೂರು ನಗರ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಎಎಸ್‌ಐ ರತ್ನಮ್ಮ ಕೆ. ಹಾಗೂ ಬೆಂಗಳೂರಿನ ಸಿಐಡಿ ಘಟಕದ ಮುಖ್ಯಪೇದೆ ಬಾಲಕೃಷ್ಣ ವೈ. ಪ್ರಶಸ್ತಿಗೆ ಭಾಜನಾರಿದ್ದಾರೆ ಎಂದು ತಿಳಿದು ಬಂದಿದೆ.














