ಮಂಗಳೂರು : ಅಕ್ಟೋಬರ್ 31 ಯುವ ಮೂಲ್ಯರ್ (Yuva Moolyer) ಪ್ರಸ್ತುತಪಡಿಸುವ ಕುಲಾಲ್ ಬ್ಯಾಡ್ಮಿಂಟನ್ ಲೀಗ್ (KBL) ಸೀಸನ್–1ರ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭವು ಇಂದು ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮದೊಂದಿಗೆ ನಡೆಯಿತು. ಡಿಸೆಂಬರ್ 13, 2026ರಂದು ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಕ್ರೀಡಾಕೂಟದ ಯಶಸ್ಸಿಗಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಗಣ್ಯರು ಹಾಗೂ ಆಯೋಜಕರ ಸಮ್ಮುಖದಲ್ಲಿ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಕುಲಾಲ ಸಮುದಾಯದ ಕ್ರೀಡಾಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದು, ಯುವಜನರಲ್ಲಿ ಕ್ರೀಡಾಸಕ್ತಿ ಬೆಳೆಸುವುದು ಹಾಗೂ ಸಮುದಾಯದ ಸದಸ್ಯರ ನಡುವೆ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಬಲಪಡಿಸುವ ಉದ್ದೇಶದಿಂದ ಈ ಲೀಗ್ ಆಯೋಜಿಸಲಾಗುತ್ತಿದೆ. ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಸಕ್ತರು ನೋಂದಣಿ ಮಾಡಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಕುಲಾಲ್ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಕರೆ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಿದ್ಧಾರ್ಥ್ ಮೂಲ್ಯ – (8951795968) ಮತ್ತು ಕಿರಣ್ ಅಟ್ಲೂರು – (8277558458) ಸಂಪರ್ಕಿಸಲು ಕೋರಲಾಗಿದೆ.














