ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಅರ್ಜಿ ವಜಾ! ರಾಯಚೂರಿನ ಮಾನ್ವಿಗೆ ಗಡಿಪಾರಾಗಿದ್ದ ಸೌಜನ್ಯ ಪರ ಹೋರಾಟಗಾರ!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಗೃಹ ಇಲಾಖೆಯ ಸಕ್ಷಮ ಅಪೀಲು ಪ್ರಾಧಿಕಾರ ತಿರಸ್ಕರಿಸಿದೆ. ಇದರಿಂದಾಗಿ ತಿಮರೋಡಿ ಅವರ ಗಡಿಪಾರು ಆದೇಶ ಮುಂದುವರಿಯುವ ಸಾಧ್ಯತೆ ಎದುರಾಗಿದೆ ಎಂದು ವರದಿಯಾಗಿದೆ.

Advertisement

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ವಿವಿಧ ಕ್ರಿಮಿನಲ್‌ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಗೆ ಸಂಬಂಧಿಸಿದ ಕಾರಣಗಳನ್ನು ಉಲ್ಲೇಖಿಸಿ ಪುತ್ತೂರು ಸಹಾಯಕ ಆಯುಕ್ತರು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಬಳಿಕ ಪೊಲೀಸರು ಗಡಿಪಾರು ಮಾಡುವ ಭಯದಿಂದ ತಲೆಮರೆಸಿಕೊಂಡು ತಮ್ಮ ವಕೀಲರ ಮೂಲಕ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಅವರು ಕರ್ನಾಟಕದ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್‌ನ ಏಕಸದಸ್ಯ ಹಾಗೂ ವಿಭಾಗೀಯ ಪೀಠಗಳು ಅವರ ಅರ್ಜಿಯನ್ನು ವಜಾಗೊಳಿಸಿ, ಕಾನೂನಿನ ಪ್ರಕಾರ ಸಂಭಂಧಪಟ್ಟ ಸಕ್ಷಮ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿದ್ದವು. ಬಳಿಕ ಸುಪ್ರೀಂ ಕೋರ್ಟ್‌ನಲ್ಲಿಯೂ ಗಡಿಪಾರು ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅಲ್ಲಿಯೂ ತಡೆಯಾಜ್ಞೆ ದೊರೆಯದೆ, ಶಾಸನಬದ್ಧ ಅಪೀಲು ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಸೂಚಿಸಲಾಗಿತ್ತು.
ಇದೀಗ ಗೃಹ ಇಲಾಖೆಯ ಸಕ್ಷಮ ಅಪೀಲು ಪ್ರಾಧಿಕಾರವೂ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಅ.17 ರಂದು ತಿರಸ್ಕರಿಸಿರುವುದರಿಂದ ಗಡಿಪಾರು ಆದೇಶಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಯಲ್ಲಿ ಮತ್ತೊಂದು ಹಂತ ಪೂರ್ಣಗೊಂಡಿದೆ ಎಂದು ಮೂಲಗಳು ವರದಿ ಮಾಡಿವೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page