ಸಿದ್ದರಾಮಯ್ಯ ಮಾಸ್ ಲೀಡರ್. ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಿದ ಬಳಿಕ ಸಿದ್ದರಾಮಯ್ಯ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅನಿಸುತ್ತಿದೆ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ನೇತೃತ್ವ ಇಲ್ಲದಿದ್ದರೆ ಕಾಂಗ್ರೆಸ್ ಎಷ್ಟೇ ಗ್ಯಾರಂಟಿ ನೀಡಿದ್ದರೂ ಅಧಿಕಾರಕ್ಕೆ ಬರುವುದೇ ಅನುಮಾನವಿತ್ತು’ ಎಂದು ಹೇಳಿದರು.
ರಾಜ್ಯದಲ್ಲಿ ಕೆಲವೇ ಜನ ಮಾಸ್ ಲೀಡರ್ಗಳಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ದೇವೇ ಗೌಡರು, ಸಿದ್ದರಾಮಯ್ಯ, ಹಿಂದೆ ಇದ್ದ ಎಸ್.ಬಂಗಾರಪ್ಪ, ದೇವರಾಜ ಅರಸು, ವೀರೇಂದ್ರ ಪಾಟೀಲ ಅವರೆಲ್ಲ ಆ ಸಾಲಿಗೆ ಸೇರುತ್ತಾರೆ. ಇಂಥ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದರೆ ಕಾಂಗ್ರೆಸ್ನವರು ಏನುಮಾತನಾಡುತ್ತಿದ್ದರು? ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಏನು ಮಾತನಾಡುತ್ತಿದ್ದರು?’ ಎಂದು ಪ್ರಶ್ನಿಸಿದರು.













