ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಬಹುಪರಾಕ್!‌ ಇಲ್ಲಿದೆ ನೋಡಿ ಕಂಪ್ಲೀಟ್‌ ಡಿಟೈಲ್ಸ್!!

ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಗೆಲುವು ಧಕ್ಕಿದ್ದು, ಆಡಳಿತಾ ರೂಢ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ ಆಗಿದೆ. ಇದೇ ತಿಂಗಳ ಅಕ್ಟೋಬರ್ 23ರಂದು ಮತದಾನ ನಡೆದಿತ್ತು. ಇವತ್ತು ಫಲಿತಾಂಶ ಬಿಡುಗಡೆ ಆಗಿದ್ದು, ಬಿಜೆಪಿ ಜೆಡಿಎಸ್‌ ಮೈತ್ರಿ (NDA) ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಭಾರೀ ಗೆಲುವು ಪಡೆದಿದ್ದಾರೆ. ಈ ಮೂಲಕ 5 ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಭಾರೀ ಹಿನ್ನಡೆ ಆಗಿದೆ.
NDA ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಬಹುಮತ ಪಡೆದಿದ್ದಾರೆ. ಇಲ್ಲಿ ಪಟ್ಟಣ್ಣ ಅವರಿಗೆ ಸೋಲುಂಟಾಗಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ 7239, ಎರಡನೇ ಸುತ್ತಿನಲ್ಲಿ 7311 ಸೇರಿ 14,540 ಮತಗಳನ್ನು ಪಡೆದರು. ಕಾಂಗ್ರೆಸ್‌ ಅಭ್ಯರ್ಥಿ ಶರಣಪ್ಪ ಮತ್ತೂರ್ ಅವರಿಗೆ ಸೋಲಾಗಿದೆ.

Advertisement

ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ (2026) ಮತ ಎಣಿಕೆಧಾರವಾಡ ಕೃಷಿ ವಿವಿಯಲ್ಲಿ ನಡೆಯಿತು. ಒಟ್ಟು 14,001 ಮತಗಳಲ್ಲಿ ಮೊದಲ ಸುತ್ತಿನ ಎಣಿಕೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಂಕನೂರ 6459 ಮತಗಳು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರು 4394 ಮತ ಗಳಿಸಿದರು. ಇಲ್ಲಿ ಸಂಕನೂರು ಮುನ್ನಡೆ ಸಾಧಿಸಿದ್ದಾರೆ. ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಸಹ ಬಿಜೆಪಿಯ ಅಭ್ಯರ್ಥಿ ಕೆ.ಎಂ. ಸುರೇಶ್ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಅವರಿಗೆ ಹಿನ್ನಡೆ ಆಗಿದೆ. ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆ, ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಕ್ಸ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಜೆಡಿಎಸ್‌ನ ಎನ್‌ಡಿಎ ಕೂಟದ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದು ಇನ್ನೆರಡು ಕ್ಷೇತ್ರಗಳಲ್ಲಿ ಗೆಲುವಿನ ಸನಿಹದಲ್ಲಿರುವುದು ಕಳೆದ ಮೂರೂವರೆ ವರ್ಷದ ಕಾಂಗ್ರೆಸಿನ ದುರಾಡಳಿತದ ಬಗ್ಗೆ ಜನ ಭ್ರಮನಿರಸನ ಗೊಂಡಿರುವುದು ಬಹಳ ಸ್ಪಷ್ಟ. ಕಾಂಗ್ರೆಸ್ ಸರ್ಕಾರದ ಕೌಂಟ್ ಡೌನ್ ಶುರುವಾಗಿದ್ದು. ಸಿಎಂ ಡಿ.ಕೆ. ಶಿವಕುಮಾರ್ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ಟೀಕಿಸಿದರು.
ರಾಜ್ಯದ ​ಸುಮಾರು 17 ಜಿಲ್ಲೆ ಮತ್ತು ಬೆಂಗಳೂರು ಮಹಾನಗರ ದಲ್ಲಿ ನಡೆದಂತಹ ಪದವೀಧರ ಮತ್ತು ಶಿಕ್ಷಕರ ವಿಧಾನ ಪರಿಷತ್ ಚುನಾವಣೆಯಲ್ಲಿ ​ಜನ ಕಾಂಗ್ರೆಸ್ ಅನ್ನು ತಿರಸ್ಕಾರ ಮಾಡಲು ಪ್ರಾರಂಭ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಕೌಂಟ್ ಡೌನ್ ಪ್ರಾರಂಭವಾಗಿದೆ. ಇದು ಅಲ್ಲದೆ ಕಳೆದ ಮೂರು ತಿಂಗಳ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಡಳಿತಕ್ಕೂ ಕೂಡ ಹಿಡಿದಿರುವಂತಹ ಒಂದು ಸತ್ಯದ ಕನ್ನಡಿ ಎಂದು ಹೇಳಿದ್ದಾರೆ.

Advertisement
Advertisement


ಭಾರತೀಯ ಜನತಾ ಪಕ್ಷ ಮತ್ತು ಜೆಡಿಎಸ್ ಬರುವಂತಹ ದಿನಗಳಲ್ಲಿ ಎಲ್ಲರೂ ಕೂಡ ಒಗ್ಗಟ್ಟಾಗಿ ಒಂದೇ ಧ್ವನಿಯಲ್ಲಿ ಕೆಲಸ ಮಾಡಿ ಜನಪರವಾದಂತಹ ಹೋರಾಟಗಳನ್ನು ಮಾಡಿದ್ದೆ ಆದರೆ, ಬರುವಂತಹ 2028ರ ವಿಧಾನಸಭಾ ಚುನಾವಣೆಯಲ್ಲಿ ಎರಡು ಮೂರು ಅಂಶ ಬಹುಮತ ನಮ್ಮ ಎನ್ ಡಿ ಎ ಕೂಟಕ್ಕೆ ಬರುವುದು ಶತಸಿದ್ಧ ಎಂದು ತಿಳಿಸಿದರು.
ಪದವೀಧರ ಮತ್ತು ಶಿಕ್ಷಕರ ಎಲ್ಲ ಮತದಾರರಿಗೂ ಅವರು ಹೃದಯಪೂರ್ವಕವಾದ ಧನ್ಯವಾದ ತಿಳಿಸಿದರು. ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಎನ್ ಡಿಎ ನಾಯಕರು ಹಾಗೂ ಎರಡೂ ಪಕ್ಷಗಳ ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page