ವಿಧಾನ ಪರಿಷತ್‌ ಗೆಲುವು ಹಿನ್ನಲೆ ಪುತ್ತೂರಿನಲ್ಲಿ ಸಂಭ್ರಮಾಚರಣೆ! ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ!!

ಪುತ್ತೂರು : ಕರ್ನಾಟಕ ವಿಧಾನ ಪರಿಷತ್ತು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವವನ್ನು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಕಾಂಗ್ರೆಸ್‌ನ ಅಡ್ಡದಾರಿಯ ಕುತಂತ್ರಗಳು ಕರ್ನಾಟಕದಲ್ಲಿ ನಡೆಯುವುದಿಲ್ಲ. ಪ್ರಜ್ಞಾವಂತ ನಾಗರಿಕರು ಮತ್ತೊಮ್ಮೆ ಬಿಜೆಪಿಗೆ ಮತ್ತು ಜನತಾದಳಕ್ಕೆ ಆಶೀರ್ವಾದ ಮಾಡಿದ್ದಾರೆ ಎಂಬುದಕ್ಕೆ ಈ ಚುನಾವಣೆ ಸಾಕ್ಷಿಯಾಗಿದೆ. ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ಬಯಲಿಗೆಳೆದು ಕ್ಯಾಬಿಟ್‌ನಲ್ಲಿರುವ ಸಚಿವರನ್ನು ರಾಜೀನಾಮೆ ಕೊಡಿಸುವ ಕೆಲಸ ಆಗುತ್ತಿದೆ. ಕರ್ನಾಟಕದಲ್ಲಿ ಸ್ಟಿಂಗ್ ಆಪರೇಷನ್, ಭ್ರಷ್ಟಾಚಾರಗಳ ನಡುವೆ ಅಭಿವೃದ್ಧಿ ಶೂನ್ಯವಾಗಿದೆ. ಹಾಲಿ ಮುಖ್ಯಮಂತ್ರಿಗಳು ಮಾಜಿ ಮುಖ್ಯಮಂತ್ರಿಗಳ ಮತ್ತು ಮಾಜಿ ಮುಖ್ಯಮಂತ್ರಿಗಳು ಹಾಲಿ ಮುಖ್ಯಮಂತ್ರಿಗಳ ಹಾಗು ಮಂತ್ರಿ ಮಂತ್ರಿಗಳ ನಡುವೆ ಕೊಕ್ಕೆ ಇಡುವಲ್ಲೇ ಕಾಲಹರಣ ಮಡುತ್ತಿದ್ದಾರೆ. ಇಂತಹ ರಾಜಕಾರಣವನ್ನು ನೋಡಿ ಜನರು ಬೇಸತ್ತು ಹೋಗಿದ್ದಾರೆ. ಮುಂದಿನ 2028ರ ಚುನಾವಣೆಯಲ್ಲಿ ಎನ್.ಡಿ.ಎ ಸರಕಾರ ಬರಲಿದೆ ಎಂದರು.

Advertisement

ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಮಾತನಾಡಿ, ರಾಜ್ಯದಲ್ಲಿ ಜನವಿರೋಧಿ ಸರಕಾರವಿದೆ. ಈ ಹಿಂದೆ ಜನರ ಆಶೀರ್ವಾದವನ್ನು ದುರುದ್ದೇಶವಿಟ್ಟು ಆಡಳಿತ ಮಾಡಿದಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಆಡಳಿತ ಮಾಡಬೇಕೆಂದು ಜನ ಬಯಸಿರುವುದು ನಿನ್ನೆಯ ವಿಧಾನಪರಿಷತ್‌ ಚುನಾವಣೆಯ ಅಭೂತಪೂರ್ವ ಜಯ ಉದಾಹರಣೆಯಾಗಿದೆ ಎಂದ ಅವರು ದೇಶದಲ್ಲಿ ನರೇಂದ್ರ ಮೋದಿ ಆಡಳಿತ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ರಾಜ್ಯ ಸರಕಾರ ಅವರ ಯೋಜನೆಗೆ ಅಡ್ಡಕಾಲು ಹಾಕುತ್ತಿದ್ದಾರೆ. ಮುಂದಿನ ತಾ.ಪಂ, ಗ್ರಾ.ಪಂ ಸ್ಥಳೀಯಾಡಳಿತ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ತೋರಿಸುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದರು.

Advertisement
Advertisement

ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು,ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಎಸ್.ಅಪ್ಪಯ್ಯ ಮಣಿಯಾಣಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ, ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್.ಸಿ.ನಾರಾಯಣ್,ನಗರ ಮಂಡಲದ ಅಧ್ಯಕ್ಷ ಶಿವಕುಮಾ‌ರ್ ಪಿ.ಬಿ, ಬಿಜೆಪಿ ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ್ ನಾಯಕ್, ಯುವರಾಜ್ ಪೆರಿಯತ್ತೋಡಿ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್,ವಿದ್ಯಾಧರ ಜೈನ್,ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ವಸಂತಲಕ್ಷ್ಮೀ, ದಿವ್ಯಾ ಪುರುಷೋತ್ತಮ್, ಬಿಜೆಪಿ ಮಾದ್ಯಮ ವಕ್ತಾರ ರಾಜೇಶ್ ಬನ್ನೂರು, ಮಹೇಶ್ ಕೇರಿ, ಪುರುಷೋತ್ತಮ ಮುಂಗ್ಲಿಮನೆ, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವಿರೂಪಾಕ್ಷ ಭಟ್ ಮಚ್ಚಿಮಲೆ, ಹರೀಶ್ ಬಿಜತ್ರೆ, ನಿತೀಶ್ ಕುಮಾ‌ರ್ ಶಾಂತಿವನ, ನಾಗೇಂದ್ರ ಬಾಳಿಗ, ಶ್ರೀಧ‌ರ್ ಗೌಡ ಕಣಜಾಲು, ಸುರೇಶ ಆಳ್ವ, ಸುರೇಶ್ಚಂದ್ರ ರೈ, ಮೋಹನ್ ಪಕ್ಕಳ, ಯಶೋದಾ ಗೌಡ, ಯತೀಂದ್ರ ಕೊಚ್ಚಿ, ವಿಶ್ವನಾಥ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page