ಮುಂಡಾಜೆ ಪ್ರೌಢಶಾಲಾ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ! ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ!!

ಬೆಳ್ತಂಗಡಿ : ಉತ್ತರ ಕನ್ನಡ ಜಿಲ್ಲೆ ಕುಮಟಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 17 ರಂದು ನಡೆದ 17 ರ ವಯೋಮಾನದ ರಾಜ್ಯಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಕು. ಕೀರ್ತಿಕಾ ಮತ್ತು ಮೊಗ್ರು ಗ್ರಾಮದ ಪರಕ್ಕಾಜೆ ನಿವಾಸಿ ಯಶ್ಮಿತಾ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಸುಮಿತ್ರಾ ಮತ್ತು ಶಿವಪ್ಪ ದಂಪತಿಗಳ ಪುತ್ರಿ ಕು. ಕೀರ್ತಿಕಾ ಹಾಗೂ ಮೊಗ್ರು ಗ್ರಾಮದ ಪರಕ್ಕಾಜೆ ನಿವಾಸಿ ನೀಲಾವತಿ ಮತ್ತು ರಾಮಣ್ಣ ಗೌಡ ದಂಪತಿಗಳ ಪುತ್ರಿ ಕು. ಯಶ್ಮಿತಾ ಇವರಿಬ್ಬರು ಬಂದಾರು ಪ್ರಾಥಮಿಕ ಶಾಲೆಯಲ್ಲಿ 8 ನೇ ತರಗತಿ ವಿದ್ಯಾಭ್ಯಾಸ ಪೂರೈಸಿ, ಮುಂಡಾಜೆ ಪ್ರೌಢಶಾಲೆಯಲ್ಲಿ 10 ತರಗತಿ ವ್ಯಾಸಂಗ ಮಾಡುತಿದ್ದಾರೆ. ಇದೇ ಬರುವ ಡಿಸೆಂಬರ್ ರಾಜಸ್ಥಾನದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.

Advertisement

17ರ ವಯೋಮಾನದ ರಾಜ್ಯ ಮಟ್ಟದ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಿ ದ್ವಿತೀಯ ಸ್ಥಾನ ಪ್ರಶಸ್ತಿ ಪಡೆದು ಇವರಿಬ್ಬರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಆಡಲಿದ್ದಾರೆ. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಇಬ್ಬರ ಸಾಧನೆಗೂ ಮೆಚ್ಚುಗೆ ವ್ಯಕ್ತಪಡಿಸಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು ಎಂದು ತಿಳಿದು ಬಂದಿದೆ.

Advertisement
Advertisement

ಇನ್ನು ಬಾಲಕರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಅತ್ಯಾರಕಂಡ ನಿವಾಸಿಗಳಾದ ಒಂದೇ ಮನೆಯ ಸಹೋದರ ಮಾ.ಪ್ರಣೀಶ್. ಎ. ಮತ್ತು ಸಹೋದರಿ ಕು. ಚೈತನ್ಯ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಅತ್ಯಾರಕಂಡ ನಿವಾಸಿ ಪ್ರಮೀಳಾ ಯಾನೆ ರೇವತಿ ಹಾಗೂ ಕುಶಾಲಪ್ಪ ಗೌಡ ದಂಪತಿಯ ಮಕ್ಕಳಾದ ಪುತ್ರ ಪ್ರಣೀಶ್.ಎ , ಹಾಗೂ ಪುತ್ರಿ ಚೈತನ್ಯ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು.
ಪ್ರಣೀಶ್.ಎ , ಬಂದಾರು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ 8 ನೇ ತರಗತಿ ತನಕ ವಿದ್ಯಾಭ್ಯಾಸ ಪಡೆದು, ಪ್ರಸ್ತುತ ಬಂಟ್ವಾಳ ತಾಲೂಕಿನ ಕೈರಂಗಳ ಶಾರದಾ ವಿದ್ಯಾಗಣಪತಿ ಪುಣ್ಯಕೋಟಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಇದೇ ಬರುವ ನವೆಂಬರ್ ಗುಜರಾತ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ . ಚೈತನ್ಯ ಬಂದಾರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾಭ್ಯಾಸ ಪಡೆದು, ಪ್ರಸ್ತುತ ಮುಂಡಾಜೆ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಪಡೆಯುತ್ತಿದಾರೆ. ಇದೇ ಬರುವ ಡಿಸೆಂಬರ್ ರಾಜಸ್ಥಾನದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.
ಇವರಿಬ್ಬರು ಬಾಲ್ಯದಿಂದಲೇ ವಾಲಿಬಾಲ್ ಪಂದ್ಯಾಟದಲ್ಲಿ ಹಲವಾರು ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.

17ರ ವಯೋಮಾನದ ರಾಜ್ಯ ಮಟ್ಟದ ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪಂದ್ಯಾಟದ ವಿಭಾಗದಲ್ಲಿ ಪ್ರಣೀಶ್ ಎ ಸ್ಪರ್ಧಿಸಿದ ತಂಡ ರಾಜ್ಯದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಹಾಗೂ 17 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಚೈತನ್ಯ ಸ್ಪರ್ದಿಸಿದ ತಂಡ ದ್ವಿತೀಯ ಸ್ಥಾನ ಪ್ರಶಸ್ತಿ ಪಡೆದು ಇವರಿಬ್ಬರು ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಆಡಲಿದ್ದಾರೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page