ಮೈಸೂರಿನಲ್ಲಿ ಹಿಂದಿನ ವರ್ಷ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ 9 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಮೈಸೂರಿನ ತ್ವರಿತ ವಿಚಾರಣಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಪಿ. ವಘಾಢೆ ಅವರು ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದ್ದಾರೆ. ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ವೇಳೆ ಈ ಘಟನೆ ನಡೆದಿತ್ತು. ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಕಲಬುರಗಿಯಿಂದ ಬಂದಿದ್ದ ಕುಟುಂಬವೊಂದು ಮೈಸೂರಿನ ದಸರಾ ವಸ್ತುಪ್ರದರ್ಶನದ ಸಮೀಪದ ಟೆಂಟ್ ನಲ್ಲಿ ವಾಸ್ತವ್ಯ ಹೂಡಿತ್ತು. ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದ ಸಂದರ್ಭದಲ್ಲಿ ಕಾರ್ತಿಕ್ 9 ವರ್ಷದ ಬಾಲಕಿಯನ್ನು ಅಲ್ಲಿಂದ ಕರೆದೊಯ್ದು ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಕೈಗೊಂಡು, ಘಟನೆ ನಡೆದ 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾರ್ತಿಕ್ ದೋಷಿಯಾಗಿದ್ದು, ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.
ಬಲೂನ್ ಮಾರಲು ಬಂದಿದ್ದ ಕುಟುಂಬದ ಬಾಲಕಿ ಮೇಲೆ ಅತ್ಯಾಚಾರ ಕೊಲೆ ದಸರಾ ವಸ್ತು ಪ್ರದರ್ಶನದ ಬಳಿ ಟೆಂಟ್‌ನಲ್ಲಿ ಮಲಗಿದ್ದಾಗ ದುಷ್ಕೃತ್ಯವೆಸಗಿದ್ರು. ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಪ್ರಕರಣದ ವಿಚಾರಣೆ ನಡೆಸಿದ್ರು. ಮೈಸೂರು ಶೀಘ್ರಗತಿ ವಿಶೇಷ ನ್ಯಾಯಾಲಯ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಆರೋಪಿ ಕಾರ್ತಿಕ್ (32) ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್, ಮೈಸೂರು-ಕೊಳ್ಳೇಗಾಲ ಮಾರ್ಗದ ಬಸ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಈ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಕಳೆದ ವರ್ಷ ದಸರಾ ಸಂದರ್ಭದಲ್ಲಿ ನಡೆದಿದ್ದ ಕೃತ್ಯಕ್ಕೆ ಈಗ ನ್ಯಾಯಾಲಯದ ತೀರ್ಪು ನೀಡಿದೆ. ಕಳೆದ ವರ್ಷ ದಸರಾ ಸಂದರ್ಭದಲ್ಲಿ ಅಕ್ಟೋಬರ್ 9 ರಂದು ನಡೆದಿದ್ದ ಪ್ರಕರಣ ಇದಾಗಿದ್ದು, ಬಾಲಕಿ ಅತ್ಯಾಚಾರವೆಸಗಿ ಆರೋಪಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ನಂತರ ಆರೋಪಿ ಕಾರ್ತಿಕ್ನನ್ನು ಪೊಲೀಸರು ಬಂಧಿಸಿದ್ದು, ಮಹಜರು ವೇಳೆ ತಪ್ಪಿಸಿಕೊಳ್ಳಲು ಕಾರ್ತಿಕ್ ಯತ್ನಿಸಿದ್ದ. ಈ ಬೇಳೆ ಸಬ್ ಇನ್ಸ್ಪೆಕ್ಟರ್ ಜೈಕೀರ್ತಿ ಆರೋಪಿ ಕಾಲಿಗೆ ಗುಂಡು ಹೊಡೆದಿದ್ರು.
ನಜರಾಬಾದ್ ಪೊಲೀಸ್ ಠಾಣೆಯ ಮೊ.ನಂ 132/25 ರ ಪ್ರಕರಣದಲ್ಲಿ, POCSO ಕಾಯ್ದೆಯ ಸೆಕ್ಷನ್ 4, 5(L), 5(M), 5(J)(4), 6 ಹಾಗೂ BNS ಕಾಯ್ದೆಯ ಸೆಕ್ಷನ್ 140(4), 65(2), 66, 103(1), 238 ರ ವಿವಿಧ ಗಂಭೀರ ಕಲಂಗಳ ಅಡಿಯಲ್ಲಿ ವಿಚಾರಣೆ ನಡೆಸಿದ ಮಾನ್ಯ ಎಫ್.ಟಿ.ಎಸ್.ಸಿ ನ್ಯಾಯಾಲಯವು, ಆರೋಪಿಯಾದ ಕಾರ್ತಿಕ್ ಅಲಿಯಾಸ್ ಗರಡಿಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿ ಆದೇಶ ಮಾಡಿದೆ.













