ಬೆಳ್ತಂಗಡಿ : ಧರ್ಮಸ್ಥಳದ ಸೌಜನು ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಎಸ್ಐಟಿಯ ನೂತನ ಮುಖ್ಯಸ್ಥರು ಸೌಜನ್ಯ ಪೋಷಕರಿಗೆ ವಿಚಾರಣೆಗೆ ಬುಲಾವ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಸೌಜನ್ಯ ಪ್ರಕರಣದ ತನಿಖೆಗೆ ಎಸ್ಐಟಿಯ ನೂತನ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಠೋಡ್ ನೇಮಕಗೊಂಡಿದ್ದು, ಇಂದಿನಿಂದ ತನಿಖೆಯ ನೇತೃತ್ವ ವಹಿಸಲಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ಪೋಷಕರಿಗೆ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.
ಚೇತನ್ ಸಿಂಗ್ ರಾಠೋಡ್ ಅವರು ಇಂದು ಬೆಳಿಗ್ಗೆ ಮಂಗಳೂರು ಎಸ್ಐಟಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ ವಿಚಾರಣೆಗೆ ಹಾಜರಾಗುವಂತೆ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಗೆ ತಿಳಿಸಿದ್ದಾರೆ.













