ಕನ್ನಡದ ಬಿಗ್ ಬಾಸ್ ಸೀಸನ್ 13 ಶುರುವಾಗಿ ಕೆಲವೇ ದಿನಗಳು ಕಳೆದಿವೆ. ಅಷ್ಟರಲ್ಲಾಗಲೇ ಓರ್ವ ಸ್ಪರ್ಧಿ ಅರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದಾರೆ.
ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ಅನಾರೋಗ್ಯದ ಕಾರಣ ನಿನ್ನೆ ಆಸ್ಪತ್ರೆ ಸೇರಿದ್ದು, ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರಬಂದಿದ್ದಾರೆ. ಈ ಕುರಿತು ಕಲರ್ಸ್ ಕನ್ನಡ ಅಧಿಕೃತ ಮಾಹಿತಿ ನೀಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ʼDISCONTINUED’ ಎಂಬ ಪೋಸ್ಟರ್ ಹಂಚಿಕೊಂಡಿದೆ.
ಬಿಗ್ ಬಾಸ್ ಮನೆಗೆ ಬರೋ ಮುಂಚೆನೇ ಓಂ ಪ್ರಕಾಶ್ ರಾವ್ ಕಾಲಿಗೆ ಪೆಟ್ಟಾಗಿತ್ತು ಎನ್ನಲಾಗಿದೆ. ಮನೆಯೊಳಗೆ ಇದ್ದ ಸಂದರ್ಭದಲ್ಲಿ ಕಾಲಿನ ನೋವು ಮತ್ತಷ್ಟು ಹೆಚ್ಚಾಗಿದ್ದು, ಇದರಿಂದ ಆರೋಗ್ಯದಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.













