ವಿಧಾನ ಪರಿಷತ್ತಿನ 4 ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರ, ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮತಗಟ್ಟೆ ಇರುವ ಶಾಲಾ-ಕಾಲೇಜುಗಳಿಗೆ ಮಾತ್ರ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಹಿನ್ನೆಲೆ ಅರ್ಹ ಮತದಾರರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ನೌಕರರಿಗೆ ವಿಶೇಷ ರಜೆ ಘೋಷಣೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ದೈವಾರ್ಷಿಕ ಚುನಾವಣೆ ನಡೆಯಲಿದೆ. ನಾಳೆ ನಡೆಯಲಿರುವ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ. ಈ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ಎರಡು ದಿನ ರಜೆ ಘೋಷಣೆ ಮಾಡಿದೆ. ಒಟ್ಟು 43 ಮತಗಟ್ಟೆಗಳನ್ನು ಶಾಲಾ-ಕಾಲೇಜುಗಳಲ್ಲಿ ಸ್ಥಾಪಿಸಲಾಗಿದೆ ಎಂದು ವರದಿಯಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಹಿನ್ನೆಲೆ ಅರ್ಹ ಮತದಾರರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಅಕ್ಟೋಬರ್ 23 ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆ ಘೋಷಿಸಿದ್ದು, ಈ ರಜೆಯು ಕೇವಲ ಮತದಾರರ ಪಟ್ಟಿಯಲ್ಲಿ ಹೆಸರಿರುವ ನೌಕರರಿಗೆ ಮಾತ್ರ ಪೂರ್ವಾನುಮತಿಯೊಂದಿಗೆ ಅನ್ವಯವಾಗುತ್ತದೆ.
ಈ ಕುರಿತು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ ರಜೆ ಜೊತೆ ವೀಕೆಂಡ್ ಇರೋ ಹಿನ್ನೆಲೆ ಮತದಾರ ನೌಕರರಿಗೆ ಸತತ 4 ದಿನಗಳ ಸಾಲು ರಜೆ ಸಿಕ್ಕಂತಾಗಲಿದೆ.
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ: ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ: ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ.














