ಪಿರಿಯಾಪಟ್ಟಣದ ಕಿರನಳ್ಳಿ ಗೇಟ್ ಬಳಿ ಖಾಸಗಿ ಸ್ಲೀಪರ್ಕೋಚ್ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 4 ಮಂದಿ ಸಾವಿಗೀಡಾಗಿದ್ದಾರೆ. ಇಪ್ಪತ್ತಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪಿರಿಯಾಪಟ್ಟಣದಿಂದ ಮೈಸೂರು ಮಾರ್ಗವಾಗಿ ಸಾಗುತ್ತಿದ್ದ ಲಾರಿ ಮತ್ತು ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ನಡುವೆ ಸರಿ ಸುಮಾರು 3.30 ಜಾವದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.














