ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ! ಉತ್ತರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದ್ದ ಧುರೀಣ!!

ಬೆಳಗಾವಿ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಮಾಜಿ ಸಂಸದ ಶಿವಾನಂದ ಕೌಜಲಗಿ ಅವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

Advertisement

ಶಿವಾನಂದ ಕೌಜಲಗಿ ಅವರು ರಾಜ್ಯ ಹಾಗೂ ಕೇಂದ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಧುರೀಣರಾಗಿದ್ದರು. ಬೈಲಹೊಂಗಲ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಕ್ಷೇತ್ರ ಮಟ್ಟದಲ್ಲಿ ಮೂಲಸೌಕರ್ಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು. 1996ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ರಾಜಕಾರಣದಲ್ಲೂ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ರಾಜ್ಯ ಸರ್ಕಾರದಲ್ಲಿ ಲೋಕೋಪಯೋಗಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ರಸ್ತೆ ಮತ್ತು ಸೇತುವೆ ನೆಟ್‌ವರ್ಕ್ ಬಲಪಡಿಸಲು ಶ್ರಮಿಸಿದ್ದರು ಎಂದು ತಿಳಿದು ಬಂದಿದೆ.

Advertisement
Advertisement

ನಾಳೆ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮವಾದ ಅನಿಗೋಳದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page