ಪಿಓಪಿ ಗಣೇಶನಿಗೆ ಕಂಟಕ!!!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ಪಿಓಪಿ ಗಣೇಶ ಮಾರಾಟ ಹಾಗೂ ತಯಾರಿಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ನಿಯಮ ಮೀರಿ ಮಾರಾಟ, ತಯಾರಿಕೆ ಮಾಡುವುದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪ್ರಾಧಿಕಾರ ಎಚ್ಚರಿಕೆ ನೀಡಿದೆ.
ಗಣೇಶ ಕೂರಿಸಲು ಆಯೋಜಕರು ಅನುಮತಿ ಪಡೆಯಲು ವಾರ್ಡ್ವಾರು ನೋಡಲ್ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಅರ್ಜಿ ಬಂದ ಒಂದೇ ದಿನದಲ್ಲಿ ಅರ್ಜಿ ಪರಿಶೀಲಿಸಿ ಅನುಮತಿ ನೀಡಲಾಗುವುದು ಎಂದು ತಿಳಿಸಿದೆ. ಸಿಂಗಲ್ ವಿಂಡೋ ಮೂಲಕ ಅರ್ಜಿ ವಿಲೇವಾರಿಗೆ ಜಿಬಿಎ ವ್ಯಾಪ್ತಿಯಲ್ಲಿ ವ್ಯವಸ್ಥೆ ಮಾಡುವ ಜೊತೆಗೆ
ಮನೆಯಲ್ಲೇ ವಿಸರ್ಜನೆ ಆಗುವ ಮೂರ್ತಿಗಳ ಬಾಕಿ ಮಣ್ಣನ್ನು ಮನೆಯಲ್ಲೇ ವಿಲೇವಾರಿ ಮಾಡಲು ಸೂಚಿಸಿದ್ದು, ಹೂಕುಂಡ ಅಥವಾ ಕೈತೋಟಗಳಿಗೆ ಮಣ್ಣು ಮರುಬಳಕೆಗೆ ಮನವಿ ಮಾಡಲಾಗಿದೆ ಮತ್ತು ಜಿಬಿಎ ನಿಗದಿ ಮಾಡಿದ ಜಾಗ ಹೊರತುಪಡಿಸಿ ಇತರೆ ಜಾಗದಲ್ಲಿ ವಿಸರ್ಜನೆ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಖಡಕ್ ಸೂಚನೆ ನೀಡಿದೆ.
ಗಣೇಶ ಹಬ್ಬ ಆಚರಣೆಯಲ್ಲಿ ಪ್ಲಾಸ್ಟಿಕ್ ಬಳಕೆಯೂ ಸಂಪೂರ್ಣ ನಿಷೇಧಿಸಿರುವುದು ಉತ್ತಮ ಬೆಳವಣಿಗೆ. ಒಂದೊಮ್ಮೆ ಆಚರಣೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಂಡುಬಂದರೆ ಆಯೋಜಕರಿಗೆ ದಂಡ ವಿಧಿಸಲಾಗುವುದು. ಪೆಂಡಾಲ್ ಅಳವಡಿಕೆ ಹಾಗೂ ಧ್ವನಿವರ್ಧಕಗಳ ಬಳಕೆಗೆ ಶುಲ್ಕ ಪಾವತಿ ಕಡ್ಡಾಯವಾಗಿದ್ದು, ಸ್ಥಳೀಯ ಪೊಲೀಸ್ ಠಾಣೆ ಅಥವಾ ಬೆಂಗಳೂರು ಒನ್‌ನಲ್ಲಿ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಯ ರಸೀದಿ ಅರ್ಜಿ ಜೊತೆ ಲಗತ್ತಿಸಿದರೆ ಮಾತ್ರ ಜಿಬಿಎಯಿಂದ ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಅನುಮತಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page