ಉಪ್ಪಿನಂಗಡಿ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ

ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್‌ 12 ಶನಿವಾರದಂದು ಉಪ್ಪಿನಂಗಡಿ ಹೋಬಳಿ ಮಟ್ಟದ “ಪ್ರಜಾ ಸೇವೆ ಆಂದೋಲನ” ಸಭೆಯು ಉಪ್ಪಿನಂಗಡಿ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.

ಈ ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಹಾಗೂ ಸಮಸ್ಯೆಗಳನ್ನು ಸಲ್ಲಿಸುವುದರ ಜೊತೆಗೆ, ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಲಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಕೋರಿ ಶಾಸಕರು ಪ್ರಕಟಣೆಯ್ಲಲಿ ತಿಳಿಸಿದ್ದಾರೆ.

Advertisement

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page