“MRPL ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು” | “ಗಾಯಾಳುಗಳ ಚಿಕಿತ್ಸಾ ವೆಚ್ಚದ ಜೊತೆಗೆ ಮೆಡಿಕಲ್‌ ಸೌಲಭ್ಯ ಕೊಡಲೇಬೇಕು” | MRPL ಆಡಳಿತ ಮಂಡಳಿ ವಿರುದ್ಧ ಬೃಹತ್‌ ಪ್ರತಿಭಟನೆ!

ಮೃತ ಪಟ್ಟ ವ್ಯಕ್ತಿಯ ಕುಟುಂಬಕ್ಕೆ 1 ಕೋಟಿ ಪರಿಹಾರ ಮೊತ್ತ ನೀಡಬೇಕು ಮತ್ತು ಮೃತಪಟ್ಟ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಹಾಗೂ ವೇತನ ಸಹಿತ ಸಂಬಳ ನೀಡಬೇಕು ಮತ್ತು ಎಂಆರ್‌ಪಿಎಲ್‌ನ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿರುವ ಎಲ್ಲಾ ಕಾರ್ಮಿಕರಿಗೆ ಮೆಡಿಕಲ್ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲಾಗಿದೆ.

Advertisement

ಈ ಬಗ್ಗೆ ಮೂಡುಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ MRPLನ ಆಡಳಿತ ನಿರ್ದೇಶಕರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಎಂಪ್ಲಾಯಿಸ್ ಯೂನಿಯನ್ ಪದಾಧಿಕಾರಿಗಳು ಹಾಗೂ ಕರ್ಮಚಾರಿ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ MRPLನಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Advertisement
Advertisement

ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಪ್ರಮುಖರಾದ ಸತ್ಯಜಿತ್ ಸುರತ್ಕಲ್, ಪ್ರಶಾಂತ್ ಮುಡಾಯಿಕೋಡಿ, ಪುಷ್ಪರಾಜ್ ಶೆಟ್ಟಿ ಮಧ್ಯ, ಲೋಕೇಶ್ ಬೊಳ್ಳಾಜೆ, ಭರತ್ ರಾಜ್ ಕೃಷ್ಣಾಪುರ, ಪ್ರವೀಣ್ ಕೃಷ್ಣಾಪುರ, ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್, ಉಪ ಠಾಣಾಧಿಕಾರಿ ರಘು ನಾಯಕ್ ಮುಂತಾದವರು ಸ್ಥಳದಲ್ಲಿದ್ದಾರೆಂದು ಮೂಲಗಳು ತಿಳಿಸಿವೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page