ಗ್ರಾಮಸ್ಥರ ಪ್ರತಿಭಟನೆಗೆ ವಕ್ರತುಂಡನ ಸಾಥ್!

ಮಂಡ್ಯ: ಗಣೇಶ ಮೆರವಣಿಗೆ ವೇಳೆ ಡಿಜೆ ಬಳಕೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ, ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮಸ್ಥರು ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು. ಸಂಜೆ ವೇಳೆ ಡಿಜೆ ಮೂಲಕ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಸಲು ಮುಂದಾಗಿದ್ದರು. ಆದರೆ ಡಿಜೆ ಬಳಕೆಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ತಿಳಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಬಳಿಕ ಗಣೇಶ ಮೂರ್ತಿಯನ್ನು ಹೆದ್ದಾರಿಯಲ್ಲೇ ಇಟ್ಟು ಧರಣಿ ನಡೆಸಿದ್ದಾರೆ.

Advertisement
Advertisement

ಪ್ರತಿಭಟನೆಯಿಂದ ಮೈಸೂರು-ಚನ್ನರಾಯಪಟ್ಟಣ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page