ಪುಂಜಾಲಕಟ್ಟೆ ಮಹಿಳೆಯ ನಿಧನ ಕೇಸ್‌ಗೆ ಬಿಗ್‌ ಟ್ವಿಸ್ಟ್‌!! ಪತಿಯೇ ಕೊಲೆ ಮಾಡಿರುವ ಶಂಕೆ!!

ಬಂಟ್ವಾಳ : ಇಲ್ಲಿನ ಪುಂಜಾಲಕಟ್ಟೆಯ ಕಾವಳಪಡೂರು ಗ್ರಾಮದ ವಗ್ಗದಲ್ಲಿರುವ ಸರ್ಕಾರಿ ವಸತಿಗೃಹದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಪತಿಯ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ ಗ್ರಾಮದ ಸುನೀತಾ ಮಹಾದೇವ್ ದೇಸಂಗಿ (34) ಮೃತಪಟ್ಟವರು. ಇವರ ಪತಿ ಸಂಜೀವಕುಮಾರ್ (36) ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದ ನಿವಾಸಿಯಾಗಿದ್ದು, ವಗ್ಗದಲ್ಲಿ ಗುತ್ತಿಗೆ ಆಧಾರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸುನೀತಾ ಅವರು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಶುಶ್ರೂಷಾಧಿಕಾರಿಯಾಗಿ ಸರ್ಕಾರಿ ಕೆಲಸ ಮಾಡುತ್ತಿದ್ದರು. ಪತ್ನಿಯ ಮಾಸಿಕ ವೇತನದ ಹಣ ನೀಡುವ ವಿಚಾರದಲ್ಲಿ ಪತಿ ಆಗಾಗ ತಕರಾರು ಮಾಡುತ್ತಿದ್ದು, ಈ ಹಿಂದೆ ಹಲ್ಲೆ ನಡೆಸಿದ್ದರೆನ್ನಲಾಗಿದೆ. ಈ ವಿಚಾರದಲ್ಲಿ ಎರಡೂ ಕುಟುಂಬಗಳ ನಡುವೆ ರಾಜಿ ಸಂಧಾನವೂ ನಡೆದಿತ್ತು .
ಅ. 22ರ ರಾತ್ರಿ ಸುನೀತಾ ಅವರು ತಮ್ಮ ಸಹೋದರ ಅರುಣ್ ಮಹಾದೇವ್ ದೇಸಂಗಿ ಅವರಿಗೆ ಕರೆ ಮಾಡಿ, ಪತಿ ಹಣದ ವಿಚಾರದಲ್ಲಿ ಮತ್ತೆ ಕಿರುಕುಳ ನೀಡುತ್ತಿದ್ದು, ಹಲ್ಲೆ ನಡೆಸುತ್ತಿರುವುದಾಗಿ ತಿಳಿಸಿ ತಕ್ಷಣ ಬರುವಂತೆ ಹೇಳಿದ್ದರು ಎನ್ನಲಾಗಿದೆ. ಬಳಿಕ ಅ. 23ರ ಮುಂಜಾನೆ ಸಂಜೀವಕುಮಾರ್ ಅವರ ಮೊಬೈಲ್‌ನಿಂದ ಕರೆ ಮಾಡಿ, ಸುನೀತಾ ಮಂಚದಿಂದ ಬಿದ್ದು ಪ್ರಜ್ಞೆ ತಪ್ಪಿದ್ದು, ಹೃದಯ ಬಡಿತ ಇಲ್ಲದ ಕಾರಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿಸಲಾಗಿತ್ತು. ಸಹೋದರ ಅರುಣ್ ಅವರು ತಾಯಿಯೊಂದಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ವಿಚಾರಿಸಿದಾಗ, ಮುಂಜಾನೆ 4.30ರ ವೇಳೆಗೆ ಸುನೀತಾ ಅವರನ್ನು ಆಸ್ಪತ್ರೆಗೆ ಕರೆತಂದಾಗಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಶವಾಗಾರದಲ್ಲಿದ್ದ ಮೃತದೇಹವನ್ನು ಪರಿಶೀಲಿಸಿದಾಗ ಹಣೆ, ಕುತ್ತಿಗೆ ಹಾಗೂ ತಲೆಯ ಭಾಗದಲ್ಲಿ ಗಾಯಗಳು ಮತ್ತು ಊತ ಕಂಡು ಬಂದಿದ್ದು, ಮೂಗು ಹಾಗೂ ಬಾಯಿಯಿಂದ ರಕ್ತ ಬಂದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Advertisement
Advertisement

ವೇತನದ ಹಣದ ವಿಚಾರದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಪತಿ ಸಂಜೀವಕುಮಾರ್ ಅವರು ಸುನೀತಾ ಅವರಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆಯಿದ್ದು, ಈ ಬಗ್ಗೆ ಸೂಕ್ತ ಕಾನೂನುಕ್ರಮ ಕೈಗೊಳ್ಳುವಂತೆ ಸಹೋದರ ಅರುಣ್ ದೂರು ನೀಡಿದ್ದಾರೆ. ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ ಎಂದು ವರದಿಯಾಗಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page