ಪುತ್ತೂರು : ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಗೌರವಿಸುವ ಹಾಗೂ ಸ್ಮರಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಕಬಕದಲ್ಲಿರುವ ಸೌಮ್ಯ ಭಟ್ ಸ್ಮಾರಕ ಪ್ರಯಾಣಿಕರ ತಂಗುದಾಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು, ಪೇಂಟಿಂಗ್ ಮೂಲಕ ತಂಗುದಾಣವನ್ನು ಸುಂದರಗೊಳಿಸಲಾಯಿತು.
ಈ ಕಾರ್ಯಕ್ರಮಕ್ಕೆ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ, ಉಜಿರೆಮಾರು, ಜಿಲ್ಲಾ ಭಾಜಪದ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಯುವ ಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷ ಶಿಶಿರ್ ಪೆರ್ವೋಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್, ಪ್ರಸನ್ನ ದರ್ಬೆ, ಪುರುಷೋತ್ತಮ್ ಮುಂಗ್ಲಿ ಮನೆ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದೇಶ್ ಶೆಟ್ಟಿ, ಪ್ರಶಾಂತ್ ಕಬಕ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.














