ಪುತ್ತೂರು ದೀಪೋತ್ಸವ 2026! ಅ.26ಕ್ಕೆ ಆಮಂತ್ರಣ ಹಾಗೂ ಲೋಗೋ ಅನಾವರಣ!!

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ (ರಿ) ಇದರ ಆಶ್ರಯದಲ್ಲಿ ಪುತ್ತೂರು ದೀಪೋತ್ಸವ 2026 ಅಕ್ಟೋಬರ್‌ 26 ಸೋಮವಾರದಂದು ಬೆಳಿಗ್ಗೆ 10:00 ಗಂಟೆಗೆ ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ಲೋಗೋ ಹಾಗೂ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

ಕಾರ್ಯಕ್ರಮದಲ್ಲಿ ಪುತ್ತೂರಿನ ಶಾಸಕ ಹಾಗೂ ದೀಪೋತ್ಸವ ಸಮಿತಿಯ ಗೌರವಾಧ್ಯಕ್ಷ ಅಶೋಕ್‌ ಕುಮಾರ್‌ ರೈ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ದೀಪೋತ್ಸವ ಸಮಿತಿಯ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಎಲುಬು ತಜ್ಷ ಡಾ. ಅಜಯ್‌ ಲೋಗೋ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ನಿರ್ದೇಶಕ ಶಶಿಕುಮಾರ್‌ ರೈ ಬಾಲ್ಯೊಟು ಆಮಂತ್ರಣ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page