ಪುತ್ತೂರು ದೇವಸ್ಥಾನದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಂದಿರುವ ದೂರುಗಳ ಪರಿಶೀಲನೆ! ಅ.16ಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರ ಭೇಟಿ!!

ಪುತ್ತೂರು : ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ವೀಕೃತವಾಗಿರುವ ದೂರು ಅರ್ಜಿಗಳ ಪರಿಶೀಲನೆ ಅ.16ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

Advertisement

ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ದೇವಸ್ಥಾನಕ್ಕೆ ದೂರು ಅರ್ಜಿಗಳ ಪರಿಶೀಲನೆಗಾಗಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ದೂರುದಾರರು ಕಡ್ಡಾಯವಾಗಿ ಹಾಜರಿರುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ. ಜೊತೆಗೆ, ದೂರಿಗೆ ಸಂಬಂಧಿಸಿದ ಲಿಖಿತ ಹೇಳಿಕೆಗಳು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಕೋರಲಾಗಿದೆ.

Advertisement
Advertisement

ದಕ್ಷಿನ ಕನ್ನಡ ಜಿಲ್ಲಾಧಿಕಾರಿಗಳು ದೇವಸ್ಥಾನದ ಕಾಮಗಾರಿಗಳ ಕುರಿತು ಸ್ವೀಕೃತವಾಗಿರುವ ದೂರನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸೆ.25ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ದೇವಳದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ದೂರುದಾರರಿಗೆ ಈ ಹಿಂದೆ ತಿಳಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಅಂದು ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page