“ಪುತ್ತೂರು ಪಿಲಿಗೊಬ್ಬು 2026” – ಸೀಸನ್‌ 4 | ಈ ಬಾರಿಯ ವಿಶೇಷತೆಗಳೇನು ಗೊತ್ತಾ??

ಪುತ್ತೂರು : ವಿಜಯ ಸಾಮ್ರಾಟ್‌ (ರಿ) ಅವರ ಆಶ್ರಯದಲ್ಲಿ ತುಳುನಾಡಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವಿಶಿಷ್ಟ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪುತ್ತೂರುವ ಪಿಲಿಗೊಬ್ಬು 2026ರ ಸೀಸನ್ 4 ಹಾಗೂ ಪುತ್ತೂರು ಪುಡ್ ಫೆಸ್ಟ್ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ಶನಿವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ. ಅಕ್ಟೋಬರ್ 17 ರಂದು ಬೆಳಗ್ಗೆ 10:30 ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಶ್ರೀಪಾದಂಗಳವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Advertisement

ಪಿಲಿಗೊಬ್ಬು ವೇದಿಕೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪ್ರೀತಂ ಜಿ ಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು- ಶಾಸಕರು- ಹಾಗೂ ಪುತ್ತೂರಿನ ಪ್ರತಿಷ್ಠಿತ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಬಾರಿಯ ಪಿಲಿಗೊಬ್ಬು ಸ್ಪರ್ಧೆಯಲ್ಲಿ ಜಿಲ್ಲೆಯ ಪ್ರಸಿದ್ಧ 9 ಆಯ್ದ ಹುಲಿವೇಷ ತಂಡಗಳು ಭಾಗವಹಿಸಲಿವೆ. ಅತ್ಯುತ್ತಮ ಪ್ರದರ್ಶನ ನೀಡುವ ತಂಡಕ್ಕೆ ಪ್ರಥಮ ಬಹುಮಾನವಾಗಿ 4 ಲಕ್ಷ ರೂ., ದ್ವಿತೀಯ ಬಹುಮಾನವಾಗಿ 3 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ 2 ಲಕ್ಷ ರೂ. ನೀಡಲಾಗುವುದು. ಇದರೊಂದಿಗೆ ಪ್ರೋತ್ಸಾಹಕ ಬಹುಮಾನಗಳನ್ನೂ ವಿತರಿಸಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗೂ ರೂ.60,000/-ಗೌರವ ಸಂಭಾವನೆ ನೀಡಿ ಗೌರವಿಸಲಾಗುವುದು ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಲಾಗಿದೆ.

Advertisement
Advertisement

ಸಮಗ್ರ ತಂಡ ಪ್ರಶಸ್ತಿ, ಸಮಗ್ರ ಶಿಸ್ತಿನ ತಂಡ ಪ್ರಶಸ್ತಿ ಹಾಗೂ ಗುಂಪು ಪ್ರಶಸ್ತಿ ವಿಭಾಗಗಳಲ್ಲಿ ಉತ್ತಮ ತಾನೆ, ಉತ್ತಮ ಬಣ್ಣ ಮತ್ತು ಉತ್ತಮ ಧರಣಿ ಮಂಡಲ ಕುಣಿತಕ್ಕೆ ಪ್ರಶಸ್ತಿಗಳನ್ನು ನೀಡಲಾಗುವುದು, ವೈಯಕ್ತಿಕ ವಿಭಾಗದಲ್ಲಿ ಕಪ್ಪು ಹುಲಿ, ಮರಿ ಹುಲಿ, ಪುತ್ತೂರುದ ಹುಲಿ, ಮುಡಿ ಹಾರಿಸುವುದು ಮತ್ತು ನಾಣ್ಯ ತೆಗೆಯುವುದು ಸೇರಿದಂತೆ ವಿವಿಧ ಸ್ಪರ್ಧೆಗಳಿಗೆ ವಿಶೇಷ ಬಹುಮಾನಗಳಿರಲಿವೆ. ಪ್ರತಿ ತಂಡದಲ್ಲಿ 15 ಹುಲಿವೇಷಧಾರಿಗಳು ಭಾಗವಹಿಸಲಿದ್ದು, ಕಲಾ ಪ್ರದರ್ಶನಕ್ಕೆ 20+2 ನಿಮಿಷಗಳ ಕಾಲವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಸಹಜ್‌ ರೈ ಬಳಜ್ಜ, ಅಧ್ಯಕ್ಷ ಪುತ್ತೂರು ಉಮೇಶ್‌ ನಾಯಕ್‌, ಕಾರ್ಯಾಧ್ಯಕ್ಷ ರತನ್‌ ರೈ ಕುಂಬ್ರ, ಪ್ರಧಾನ ಕಾರ್ಯದರ್ಶಿ ಶರತ್‌ ಆಳ್ವ ಕೂರೇಲು ಮತ್ತು ಕೋಶಾಧಿಕಾರಿ ಅಶೋಕ್‌ ಅಡೂರು ಉಪಸ್ಥಿತರಿದ್ದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page