ಪುತ್ತೂರು ಸಾಹಿತ್ಯೋತ್ಸವ ಸಮಾರಂಭ! ಮೇಳೈಸಲಿದೆ ಬಾಲ ಸಾಹಿತಿಗಳ ಸಾಮಾವೇಶ!!

ಪುತ್ತೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಶಿಕ್ಷಣಾಧಿಕಾರಿಗಳ ಕಚೇರಿ, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಹಯೋಗದಲ್ಲಿ ಪುತ್ತೂರು ಸಾಹಿತ್ಯೋತ್ಸವ ಸಮಾರಂಭ ಅ. 25ರಂದು ಬೆಳಗ್ಗೆ 10ರಿಂದ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್,ಸಾಹಿತ್ಯ ಪೋಷಕ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ತಿಳಿಸಿದರು.

Advertisement

ಅವರು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ತಾಲೂಕು ಘಟಕದ ವತಿಯಿಂದ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಅವರ ಮಹಾಪೋಷಕತ್ವದಲ್ಲಿ ತಾಲೂಕಿನ 32 ಗ್ರಾಮಗಳಲ್ಲಿ ಗ್ರಾಮ ಸಾಹಿತ್ಯ ಸಂಭ್ರಮ ನಡೆದಿದ್ದು, ಅದರ ಸಮಾರೋಪ ಹಾಗೂ ಪುತ್ತೂರು ನಗರ ವ್ಯಾಪ್ತಿಯ ಬಾಲ ಸಾಹಿತಿಗಳ ಸಮಾವೇಶವನ್ನು ಪುತ್ತೂರು ಸಾಹಿತ್ಯೋತ್ಸವದ ಹೆಸರಿನಲ್ಲಿ ನಡೆಸಲಿದ್ದೇವೆ. ಸಾಹಿತ್ಯ ಸಮ್ಮೇಳನದ ರೀತಿ ದಿನವಿಡೀ ನಡೆಯುವ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾಯೀಶ್ವರಿ ಸರ್ವಾಧ್ಯಕ್ಷತೆ ವಹಿಸಲಿದ್ದು, ಸಾಹಿತ್ಯ ಪೋಷಕ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಸಮಾರಂಭ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಉದ್ಘಾಟನೆಯ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Advertisement
Advertisement

ಸಮಾರಂಭದಲ್ಲಿ 14 ಮಂದಿ ಸಾಧಕರು ಹಾಗೂ 2 ಸಂಸ್ಥೆಗಳಿಗೆ ಸಾಧಕ ಪುರಸ್ಕಾರ ನೀಡಲಾಗುತ್ತದೆ. ಸಾಹಿತ್ಯೋತ್ಸವದಲ್ಲಿ ಕವಿಗೋಷ್ಠಿ, ಕಥಾಗೋಷ್ಠಿ, ಪ್ರವಾಸ ಕಥನ ಮೊದಲಾದ ಸಾಹಿತ್ಯ ಚಟುವಟಿಕೆಗಳು ನಡೆಯಲಿದೆ. ಜತೆಗೆ ಬೆಂಗಳೂರಿನ ದರ್ಶನ್ ಗರ್ತಿಗೆರೆ ಅವರು ಕನ್ನಡದಲ್ಲೂ ಐಎಎಸ್ ಬರೆಯಿರಿ ಎಂಬ ವಿಚಾರದ ಕುರಿತು ಮಾಹಿತಿ ನೀಡಲಿದ್ದಾರೆ. ಸಂಜೆ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಜೀವನ್ ಎನ್. ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಾಹಿತ್ಯ ಪೋಷಕ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ, ಸಂಚಾಲಕರಾದ ಡಾ. ಹರ್ಷಕುಮಾರ್ ರೈ, ನಾರಾಯಣ ಕುಂಬ್ರ ಉಪಸ್ಥಿತರಿದ್ದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page